ಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ಮಾಡಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.
ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಪತಿ ಮುಂದಾಗಿದ್ದ.
ಇದನ್ನೂ ಓದಿ:
ಚಿಂಚೋಳಿ ಪಟ್ಟಣದ ಪ್ರಿಯಾಂಕಾ ಹಡಪದ್ (30) ಮೃತಪಟ್ಟ ಮಹಿಳೆ. ಸೂರ್ಯಕಾಂತ್ ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಪ್ರಿಯಾಂಕಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಕೊಲೆ ಬಳಿಕ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಸೂರ್ಯಕಾಂತ್ ಪ್ರಯತ್ನಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:
ಪ್ರಿಯಾಂಕಾ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸೂರ್ಯಕಾಂತ್‌ನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…