Featured

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ – ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ  ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.

ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ಇದೇ ವಿಚಾರಕ್ಕೆ ಪುಷ್ಪ ಮತ್ತು ಮಹೇಶ್ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಹೆಂಡತಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಮಹೇಶ್ ಆಕೆಯ ಮೇಲೆ ತೀವ್ರವಾಗಿ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: 

ನಡೆದಿದ್ದೇನು?
ಯಥಾಪ್ರಕಾರ ನಿನ್ನೆ ತಡರಾತ್ರಿ ಪುಷ್ಪ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಜೋರಾಗಿ ಹೊಡೆದಿದ್ದಾನೆ. ಪುಷ್ಪ ಕೆಳಗೆ ಬಿದ್ದ ನಂತರ, ಅಷ್ಟಕ್ಕೇ ನಿಲ್ಲಿಸದ ಮಹೇಶ್ ದಿಂಬಿನಿಂದ ಆಕೆಯ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಪೊಲೀಸರಿಗೆ ಶರಣಾದ ಆರೋಪಿ:
ಪತ್ನಿಯನ್ನು ಕೊಂದ ನಂತರ ಪಶ್ಚಾತ್ತಾಪಕ್ಕೊಳಗಾದನೋ ಅಥವಾ ಕಾನೂನಿನ ಭಯದಿಂದಲೋ ಗೊತ್ತಿಲ್ಲ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

6 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

7 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

7 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

10 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

10 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

10 hours ago