Featured

ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಹೆಂಡತಿ ಅರೆಸ್ಟ್ – Vishwanews24

ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಹೆಂಡತಿ ಅರೆಸ್ಟ್

ಬೆಳಗಾವಿ: ಅಮವಾಸ್ಯೆ ಹಿನ್ನೆಲೆ ಗಂಡನೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಪತ್ನಿ ಎದುರೇ ಗಂಡನ  ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು,  ಹೆಂಡತಿ ಪ್ರಿಯಾಂಕಾ ಜಗಮತ್ತಿಯನ್ನ ಮೂಡಲಗಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಸೋಮವಾರ ಭೀಮನ ಅಮವಾಸ್ಯೆಯಾಗಿದ್ದರಿಂದ ಶಂಕರ್ ಜಗಮತ್ತಿ ಮತ್ತು ಪ್ರಿಯಾಂಕಾ ಜಗಮತ್ತಿ ದಂಪತಿ ಮೂಡಲಗಿ  ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ  ಬಂದಿದ್ದರು. ಈ ವೇಳೆ ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳು ಪತಿಯ ಹತ್ಯೆ ಮಾಡಿದ್ದು, ಸ್ಥಳದಲ್ಲೇ ಶಂಕರ್ ಜಗಮತ್ತಿ ಸಾವನ್ನಪ್ಪಿದ್ದರು.

ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪ್ರಿಯಾಂಕಾಳ ಪ್ರಿಯಕರ ಶ್ರೀಧರ್ ತಳವಾರ(21), ಶಂಕರ್ ಪತ್ನಿ ಪ್ರಿಯಾಂಕ ಜಗಮತ್ತಿಯನ್ನು (21) ಬಂಧಿಸಲಾಗಿದೆ. ಮೊದಲೇ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದ ಪ್ರಿಯಾಂಕಾ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್‌ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಬರುತ್ತಿದ್ದಂತೆ ಆರೋಪಿ ಶ್ರೀಧರ್ ಪ್ರಿಯಾಂಕಾ ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದ.

ಇತ್ತ ಏನು ಗೊತ್ತಿಲ್ಲದಂತೆ ನಾಟಕ ಆಡಿದ್ದ ಪ್ರಿಯಾಂಕಾ ಬೈಕ್ ತನ್ನಿ ಎಂದು ದೂರದಲ್ಲಿ ನಿಂತಿದ್ದಳು. ಕೊಲೆ ಬಳಿಕ ಏನೂ ಗೊತ್ತಿಲ್ಲದಂತೆ ಸುಪನಾತಿ ಹೆಂಡತಿ ಭರ್ಜರಿ ನಾಟಕ ಆಡಿದ್ದಳು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ  ಇರುವುದು ಬೆಳಕಿಗೆ ಬಂದಿದೆ. ಈ ವೇಳೆ ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಿದ್ದಾರೆ.

ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago