ಹಾವೇರಿ: ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ ಪತಿ. ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಕುರಿಗಾಹಿಯಾಗಿದ್ದರು. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನನ್ನ ಹೆಂಡತಿ, ಅವರ ತಂದೆ-ತಾಯಿ, ಅವರ ಮಾವ ಭೀರಪ್ಪ, ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಮಾನಸಿಕವಾಗಿ ತುಂಬಾ ಹಿಂಸೆ ಕೊಟ್ಟಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕಣ್ಣೀರು ಹಾಕಿದ್ದಾರೆ. ಘಟನೆ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…