ವಿದಿಶಾ: ಬಿಜೆಪಿಯ ಮಾಜಿ ಕಾರ್ಪೋರೇಟರ್ ಓರ್ವರು ಪತ್ನಿ ಹಾಗೂ ತನ್ನಿಬ್ಬರು ಮಕ್ಕಳ ಸಹಿತ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸಂಜೀವ್ ಮಿಶ್ರಾ (45), ಅವರ ಪತ್ನಿ ನೀಲಂ ಮಿಶ್ರಾ,(೪೨) ಇಬ್ಬರು ಪುತ್ರರಾದ ಅನ್ಮೋಲ್ (13) ಮತ್ತು ಸಾರ್ಥಕ್ ಮಿಶ್ರಾ ( 7) ಎಂದು ಗುರುತಿಸಲಾಗಿದೆ.
ಸಂಜೀವ್ ಮಿಶ್ರಾ ಮಾಜಿ ಬಿಜೆಪಿ ಕಾರ್ಪೊರೇಟರ್ ಆಗಿದ್ದು, ಬ್ರಾಸ್ ಮಿಲ್ ಬಳಿ ‘ಜನತಾ ಭೋಜ್ನಾಲಯ’ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದರು. ಇಬ್ಬರು ಮಕ್ಕಳಲ್ಲಿ ಹಿರಿಯ ಪುತ್ರ ಅನ್ಮೋಲ್ ” ಮಸ್ಕ್ಯುಲರ್ ಡಿಸ್ಟ್ರೋಫಿ’ ಎಂಬ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದು, ತಂದೆಯಾಗಿ ಕಷ್ಟಪಟ್ಟು ಎಲ್ಲಾ ಚಿಕಿತ್ಸೆ ಕೊಡಿಸಿದರೂ ಕಾಯಿಲೆ ಕಾಡುತ್ತಿತ್ತು.
ಇದೇ ಕಾರಣದಿಂದ ಗುರುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ “ದೇವರು ಶತ್ರುವಿನ ಮಕ್ಕಳನ್ನೂ ಈ ಕಾಯಿಲೆಯಿಂದ ಪಾರು ಮಾಡಲಿ, ನಾನು ಇನ್ನು ಮಗುವನ್ನು ಉಳಿಸಲು ಆಗುವುದಿಲ್ಲ. ನಾನು ಜೀವಂತವಾಗಿ ಇರಲು ಸಾಧ್ಯವಿಲ್ಲ” ಎಂದು ಸಂಜೀವ್ ಪೋಸ್ಟ್ ಮಾಡಿದ್ದರು.. ಇದನ್ನು ಗಮನಿಸಿದ ಸ್ನೇಹಿತರು ಮನೆಗೆ ಬಂದು ಆಸ್ಪತ್ರೆಗೆ ದಾಖಲಿಸಿದ್ದು ಆದರೆ ನಾಲ್ವರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…