Featured

ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ – vishwanews24

ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ದಾವಣಗೆರೆ : ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ನಡೆದಿದೆ. 35 ವರ್ಷದ ಉದಯ್ ಎಂಬಾತ ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಎಂಬುವರನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎಂಟು ತಿಂಗಳ ಹಿಂದೆ ಉದಯ್ ಅವರ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿಯನ್ನು ಕಳೆದುಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಉದಯ್ ಇಬ್ಬರು ಮಕ್ಕಳ ಕುತ್ತಿಗೆ ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಲತಃ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಚಳಗೇರೆ ಗ್ರಾಮದ ಹೇಮಾ ಹಾಗೂ ಉದಯ್ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಹೇಮಾ ಸಾವಿನ ನಂತರ ಉದಯ್ ಖಿನ್ನತೆಗೆ ಒಳಗಾಗಿದ್ದರು.  ಏಳು ಪುಟಗಳ ಪತ್ರ ಬರೆದಿಟ್ಟು, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago