Featured

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ -Vishwanews24

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ -Vishwanews24

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

ಕನ್ನಡ ಪ್ರಭ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ.

ದಿ ಹಿಂದು ಪತ್ರಿಕೆಯ ಮಂಗಳೂರು ಕಚೇರಿ ಬ್ಯುರೋ ಮುಖ್ಯಸ್ಥರಾದ ರವಿಪ್ರಸಾದ್ ಕಮಿಲ,ಬೆಸೆಂಟ್ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ.ಕಿಕ್ಕೇರಿ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ಮಾಡಿದೆ.

ಜುಲೈ 22ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಶಸ್ತಿ ಪ್ರದಾನ ಮಾಡಲಿರುವರು.

Vishwa News 24

Recent Posts

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

5 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

13 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

20 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

33 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

45 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

57 minutes ago