Featured

ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲ , ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಸಚಿವೆ ಶೋಭಾ – Vishwanews24

ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ..

ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ, ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ..

ಯಾವುದಕ್ಕೂ  ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ..

ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ, ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡಬಾರದು..

ಕೇಂದ್ರದ ಮಂತ್ರಿಗಳೊಂದಿಗೆ ಜಗಳವಾಡಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರಕ್ಕೆ ಅನುದಾನ ತಂದಿದ್ದೇನೆ..

ಚಿಕ್ಕಮಗಳೂರು: ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ. ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಅವರು ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ. ಇಲ್ಲೂ ನಡೆಸಿದ್ದಾರೆ. ಇದ್ಯಾವುದಕ್ಕೂ ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ತಿರುಗೇಟು ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಆದರೆ, ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡಬಾರದು. ನಾವು ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ ಎಂದರು.

ಚಿಕ್ಕಮಗಳೂರು- ಉಡುಪಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದೇನೆಂಬ ಮಾಹಿತಿ ನನಗೂ ಇದೆ. ನಾನು ಇದುವರೆಯೂ ಯಾವ ಗುತ್ತಿಗೆದಾರನಿಂದ ಒಂದು ರೂ. ಪಡೆದಿಲ್ಲ ಅವರ ಮುಖವನ್ನು ಕೂಡ ನೋಡಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದರು.

ಕೇಂದ್ರದ ಮಂತ್ರಿಗಳೊಂದಿಗೆ ಜಗಳವಾಡಿ ಇಲ್ಲಿಗೆ ಅನುದಾನ ತಂದಿದ್ದೇನೆ. ಅಭಿಯಾನ, ಪತ್ರ ಚಳುವಳಿ ಯಾವುದು ಎಫೇಕ್ಟ್ ಆಗಲ್ಲ. ನಾನು ಮಂತ್ರಿಯಾಗಿ ಒಳ್ಳೇ ಕೆಲಸ ಮಾಡಿದ್ದೇನೆ.‌ ಇದೇ‌ ರೀತಿ ಹಿಂದಿನ ಚುನಾವಣೆಯಲ್ಲೂ ಮಾಡಿದ್ದರು ಎಂದು ಹೇಳಿದರು. ಅನುಧಾನ ತಂದಿರುವ ಬಗ್ಗೆ ಪ್ರಶ್ನಿಸುವಾಗ ಬಹಳ ಬುದ್ದಿವಂತಿಕೆಯಿಂದ ಕೇಳಿದ್ದಾರೆ. 2019, 20,21ರ ಅನುದಾನ ಕೇಳಿದ್ದಾರೆ. ಆದರೆ ಆ ವರ್ಷದಲ್ಲಿ ಕೇಂದ್ರದಿಂದ ಎಂ.ಪಿಗಳಿಗೆ ನಿಧಿಯನ್ನು ಕೊಟ್ಟಿಲ್ಲ ಆ ವರ್ಷ ನಿಧಿಯನ್ನು ಕೊರೊನಕ್ಕೆ ಬಳಕೆ ಮಾಡಲಾಗಿತ್ತು. ಆರ್ ಟಿಐನಲ್ಲಿ ಕೇಳಲಾಗಿದೆ ಇದರ ಹಿಂದಿರುವ ಉದ್ದೇಶ ಕೆಟ್ಟದಿದೆ. ಇದನ್ನು ಯಾರು ಮಾಡಿದ್ದಾರೆ ಅವರು ಮುಂದೇ ಅನುಭವಿಸುತ್ತಾರೆ ಎಂದು ಹೇಳಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago