ಕುವೈತ್: 600 ದಿನಾರ್‌ಗಳಿಂದ ಕಡಿಮೆ ಸಂಬಳ ಇರುವ ಹಾಗೂ ಮಾನ್ಯತೆ ಪಡೆದ ವಿವಿಯಿಂದ ಪದವಿ ಅಥವಾ ಡಿಪ್ಲೊಮಾ ಹೊಂದಿಲ್ಲದೇ ಇರುವ ವಿದೇಶಿ ಚಾಲಕರ ಚಾಲನಾ ಪರವಾನಗಿಯನ್ನು ಹಿಂಪಡೆಯಲು ಕುವೈತ್ ಸರ್ಕಾರ ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದರೆ ಭಾರತೀಯರು ಸೇರಿ 3 ಲಕ್ಷ ಚಾಲಕರಿಗೆ ಸಂಕಷ್ಟ ಎದುರಾಗಲಿದೆ.
ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಕುವೈತ್ ಗೃಹ ಸಚಿವಾಲಯ ತಿಳಿಸಿದೆ. ಸರ್ಕಾರದ ಈ ನಿರ್ಧಾರವು ಅಲ್ಲಿ ವಾಸಿಸುತ್ತಿರುವ ವಿದೇಶಿ ಚಾಲಕರಿಗೆ ಆಶ್ಚರ್ಯ ಮತ್ತು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದರಿಂದ ಇವರಿಗೆ ಸಂಬಳ ಕೊಟ್ಟು ಸಲಹುತ್ತಿರುವ ಟ್ಯಾಕ್ಸಿ ಕಂಪನಿಗಳು ಹಾಗೂ ಮಾಲೀಕರಿಗೂ ತೊಂದರೆಯಾಗಲಿದೆ.
ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕುವೈತ್ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯು ಸಂಬಳ ಮತ್ತು ಪದವಿ ಆಧಾರದಲ್ಲಿ ಅರ್ಹತೆ ಪೂರೈಸದವರ ಚಾಲನಾ ಪರವಾನಗಿ ರದ್ದುಪಡಿಸಲು ಶಿಫಾರಸು ಮಾಡಿದೆ. ಇದಕ್ಕೆ ನಾನಾ ವಲಯಗಳಿಂದ ವಿರೋಧ ವ್ಯಕ್ತವಾಗಿದೆ.
ಸಂಚಾರ ದಟ್ಟಣೆ ತಗ್ಗಿಸಲು ಅನೇಕ ಪರ್ಯಾಯ ಮಾರ್ಗಗಳಿವೆ. ರಸ್ತೆಗಳ ಸುಧಾರಣೆ, ಸೇತುವೆಗಳು ಹಾಗೂ ಸುರಂಗಗಳ ನಿರ್ಮಾಣ, ಸಾರ್ವಜನಿಕ ಸಾರಿಗೆ ಸುಧಾರಣೆ ಸೇರಿದಂತೆ ನಾನಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ನಾಗರಿಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…