Featured

ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ :  ಅಶ್ವತ್ಥನಾರಾಯಣ -Vishwanews24

ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ :  ಅಶ್ವತ್ಥನಾರಾಯಣ -Vishwanews24

ಬೆಂಗಳೂರು : “ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ” ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭದ ದಿನಾಂಕದ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ವಿಚಾರದ ಬಗ್ಗೆ ಗೊಂದಲ ಬೇಡ. ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರವೇ ಸರ್ಕಾರದ ಆದ್ಯತೆ. ಕೊರೊನಾ ಸಂಪೂರ್ಣವಾಗಿ ನಿವಾರಣೆಯಾಗದೇ ಇರುವ ಕಾರಣ ಪದವಿ ಕಾಲೇಜುಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ” ಎಂದಿದ್ದಾರೆ.

“ರಾಜ್ಯದಲ್ಲಿ ಶೇ.65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿದೆ. ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಇಲ್ಲಿಯವರೆಗೆ 3.13 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. 29,241 ಸಿಬ್ಬಂದಿಗಳಲ್ಲಿ 24,875 ಮಂದಿಗೆ ಲಸಿಕೆ ಹಾಕಲಾಗಿದೆ” ಎಂದಿದ್ದಾರೆ.

“ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ. ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ಪ್ರಥಮ ಆದ್ಯತೆ. ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಈಗಾಗಲೇ 65% ಲಸಿಕಾಕರಣವಾಗಿದೆ. ಖಾಸಗಿ ಕಾಲೇಜುಗಳಲ್ಲೂ ತ್ವರಿತವಾಗಿ ಲಸಿಕಾಕರಣ ನಡೆಸಲು ಸೂಚಿಸಲಾಗಿದೆ. ಎಲ್ಲರ ಸುರಕ್ಷತೆ ಕಾಪಾಡೋಣ” ಎಂದು ಟ್ವೀಟ್‌‌ ಮೂಲಕ ತಿಳಿಸಿದ್ದಾರೆ.

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

5 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

13 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

47 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago