ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಕುಂದಾಪುರ : ಕೊರೊನಾ ಹಿನ್ನೆಲೆಯಲ್ಲಿ ಹಿನ್ನೆಡೆಯಾಗಿರುವ ಪೌತಿ ಅದಾಲತ್ ನ್ನು ಕೂಡಲೇ ಪುನರಾರಂಭಿಸಿ, ಮೂರು ತಿಂಗಳೊಳಗೆ ಫಲಾನುಭವಿಗಳಿಗೆ ದಾಖಲೆ ನೀಡಿ, ಪ್ರಕರಣ ಮುಕ್ತಾಯ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆಯ 18 ವಿಭಾಗದ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ತಿಂಗಳು ಎಲ್ಲಾ ತಾಲೂಕಿನಲ್ಲೂ ಪೌತಿ ಅದಾಲತ್ ನಡೆಸಲಾಗುತ್ತದೆ. ಆಕ್ಷೇಪ ಬಂದಲ್ಲಿ ತಹಸೀಲ್ದಾರ್ ವಿಚಾರಣೆ ನಡೆಸಿ ಆದೇಶ ಮಾಡುತ್ತಾರೆ. ಪಹಣೆ ಪತ್ರದ ಕಾಲಂ 3,9 ಹೊಂದಾಣಿಕೆ ಆಗದ 20 ಪ್ರಕರಣ ಜಿಲ್ಲೆಯಲ್ಲಿ ಬಾಕಿಯಿದ್ದು, ಆದ್ಯತೆ ಮೇಲೆ ವಿಲೇವಾರಿ ಮಾಡಲು ಸೂಚನೆ ನೀಡಲಾಗಿದೆ . ಸಾವಿರಕ್ಕೂ ಹೆಚ್ಚು 11 ಇ ನಕ್ಷೆ ಅರ್ಜಿ ವಿಲೇವಾರಿಗೆ ಬಾಕಿ ಇದ್ದು , ಒಂದು ತಿಂಗಳೊಳಗೆ ಎಲ್ಲಾ ಪ್ರಕರಣಗಳನ್ನು ಮುಗಿಸಲು ಸೂಚಿಸಲಾಗಿದೆ ಎಂದರು.

ಆಶ್ರಯ ಮನೆ ನಿವೇಶನಕ್ಕೆ ಹಾಗೂ ಘನ ತ್ಯಾಜ್ಯ ವಿಲೇವಾರಿ ಗೆ ಗ್ರಾಮ ಪಂಚಾಯತಿಗಳಲ್ಲಿ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ. ಅರ್ಹ ಫಲಾನುಭವಿಗಳಿಗೆ ಪಿಂಚಣಿ ದೊರಕಬೇಕು ಎನ್ನುವ ಸದುದ್ದೇಶದಿಂದ ಒಂದು ತಿಂಗಳ ಒಳಗೆ ಅರ್ಹ ಫಲಾನುಭವಿಗಳ ಹಾಗೂ ಒಂದು ವಾರದಲ್ಲಿ ಅನರ್ಹ ಪಿಂಚಣಿ ಫಲಾನುಭವಿಗಳ ಪತ್ತೆ ಮಾಡಿ, ಪಟ್ಟಿ ನೀಡಬೇಕು. ಕರ್ತವ್ಯ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳಿಂದ ಪಿಂಚಣಿ ಹಣದ ಜೊತೆ ಬಡ್ಡಿಯನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎನ್ನುವ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಯೋಜನೆ ಪೈಲಟ್ ಹಂತದಲ್ಲಿ ಜ. 30 ರಂದು ಉಡುಪಿ ಜಿಲ್ಲೆಯಲ್ಲಿ ನಡೆಯಲ್ಲಿದೆ. ಜಿಲ್ಲಾಧಿಕಾರಿ, ಅವರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ಎಲ್ಲ ತಹಶೀಲ್ದಾರರು ಸರ್ಕಾರದ ಯೋಜನೆಯಂತೆ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ನಡೆಯಲಿದೆ. ಬೆಳಗ್ಗೆಯಿಂದ ಸಂಜೆ ತನಕ ಗ್ರಾಮದಲ್ಲಿದ್ದು, ಜನರ ಸಮಸ್ಯೆ ಆಲಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತದೆ. ಇದರ ಸಾಧಕ-ಬಾಧಕದ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ನಿಯಮ ಉಲ್ಲಂಘಿಸಿ ನಡೆಸುವ ಕೆಂಪು ಕಲ್ಲು ಗಣಿಗಾರಿಕೆ ಹಾಗೂ ಸರ್ಕಾರಿ ಜಾಗದಲ್ಲಿ ಗಣಿಗಾರಿಕೆಗೆ ಅವಕಾಶವಿಲ್ಲ. ಅಕ್ರಮ ಹಾಗೂ ಅತಿಕ್ರಮ ಗಣಿ ವಿರುದ್ಧ ನಿರ್ದಾಕ್ಷಣ್ಯ ಕ್ರಮಕ್ಕೆ ಸೂಚಿಸಲಾಗಿದೆ. ದಾಖಲೆ ಸರಿ ಇರುವ ಪಟ್ಟಾ ಜಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಅನುಮತಿ ಪಡೆದಿರುವ 50 ಜಲ್ಲಿ ಕ್ರಷರ್ ಇದೆ. ಅನುಮಿತಿ ಇಲ್ಲದ ಕಲ್ಲು ಕ್ವಾರಿ ಹಾಗೂ ಕ್ರಷರ್ ಗಳನ್ನು ನಿಲ್ಲಿಸಲು ಸೂಚಿಸಲಾಗಿದೆ. ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ತಹಸೀಲ್ದಾರ್ ಆನಂದಪ್ಪ ಹೆಚ್.ನಾಯ್ಕ್ ಇದ್ದರು

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

9 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

11 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

11 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

11 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

11 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

12 hours ago