Featured

ಪದ್ಮಭೂಷಣ ಪ್ರಶಸ್ತಿಗೆ ಅದ್ದೂರಿ ಸ್ವಾಗತ – Vishwanews24

  • ಪದ್ಮಭೂಷಣ ಪ್ರಶಸ್ತಿಗೆ ಅದ್ದೂರಿ ಸ್ವಾಗತ

  • ಉಡುಪಿಯಲ್ಲಿ ಮೆರವಣಿಗೆ ನಡೆಸಿದ ಸಾರ್ವಜನಿಕರು

  • ಕೃಷ್ಣ ಮಠದಲ್ಲಿ, ಪೇಜಾವರ ಮಠದಲ್ಲಿ ಪೂಜೆ

  • ಅಷ್ಟಮಠಾಧೀಶರು, ಜನಪ್ರತಿನಿಧಿಗಳು ಉಪಸ್ಥಿತಿ

ಉಡುಪಿ ಪೇಜಾವರ ಮಠಾಧೀಶ ವೃಂದಾವನಸ್ಥರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ರಾಷ್ಡ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದು ಇಂದು ಉಡುಪಿಗೆ ಆಗಮಿಸಿದರು. ನಗರದ ಸಂಸ್ಕೃತ ಕಾಲೇಜು ವಠಾರದಿಂದ ಪ್ರಶಸ್ತಿಯನ್ನ ಗೌರವಯುತವಾಗಿ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಲಾಯಿತು. ರಥಬೀದಿಯ ಮೂಲಕ ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಪ್ರಶಸ್ತಿಯನ್ನು ಶ್ರೀಕೃಷ್ಣನ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ರಥಬೀದಿಯಲ್ಲಿ ಒಂದು ಸುತ್ತು ಮೆರವಣಿಗೆ ಮಾಡಿ ವಿಶ್ವೇಶತೀರ್ಥ ಸ್ವಾಮೀಜಿ ಕುಳಿತುಕೊಳ್ಳುತ್ತಿದ್ದ ಪೀಠದಲ್ಲಿ ಪ್ರಶಸ್ತಿಯನ್ನು ಇಟ್ಟು ಆರತಿ ಬೆಳಗಲಾಯ್ತು. ಸ್ವಾಮೀಜಿಗಳು ಪುಷ್ಪಾರ್ಚನೆ ಸಲ್ಲಿಕೆ ಮಾಡಿದರು. ಪರ್ಯಾಯ ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಸ್ವಾಮೀಜಿ ಸೋದೆ ಶ್ರೀ, ಪಲಿಮಾರು ಕಿರಿಯ ಶ್ರೀಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಸಕ ರಘುಪತಿ ಭಟ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಉಡುಪಿಯ ಜನಪ್ರತಿನಿಧಿಗಳು ಅಧಿಕಾರಿಗಳು ಇದ್ದರು. ಜಿಲ್ಲಾ ಆಡಳಿತದ ವತಿಯಿಂದ ಪ್ರಶಸ್ತಿಗೆ ಮತ್ತು ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಲಾಯಿತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

16 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

17 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

17 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

20 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

20 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

20 hours ago