ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ  – vishwanews24

Featured, ರಾಜ್ಯ ನ್ಯೂಸ್

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ 

ಕಾರವಾರ : ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.

Leave a Reply