ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮ ರಸ್ತೆ ತೋಟದಲ್ಲಿ ನಡೆದ ಕಾರ್ಯಕರ್ತರ ಅಭಿನಂದನಾ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, ಬೇಕಾದರೆ ನಮ್ಮನ್ನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಿ, ಇದಕ್ಕೆಲ್ಲ ಜಗ್ಗಲ್ಲ, ಪ್ರೀತಿ ವಿಶ್ವಾಸಕ್ಕೆ ಬಗ್ಗುತ್ತೇವೆ, ನನ್ನನ್ನ ನನ್ನ ಕುಟುಂಬವನ್ನ ಬೆದರಿಕೆ ಹಾಕಿ ಎದುರಿಸಿ ಗೆಲ್ಲೋಕಾಗಲ್ಲ, ಅದು ನಮ್ಮ ರಕ್ತದಲ್ಲೇ ಇಲ್ಲ ಎಂದಿದ್ದಾರೆ.
ಇದೇವೇಳೆ, ಸಿಎಂ ಕುಮಾರಸ್ವಾಮಿಯವರು ಸಾಲಮನ್ನಾಕ್ಕಾಗಿ ಈಗಾಗಲೇ ಬ್ಯಾಂಕ್ ಮ್ಯಾನೇಜರ್ಗಳ ಜೊತೆ ಚರ್ಚೆ ನಡೆಸಿದ್ದಾರೆ. ಸೂಕ್ತಕಾಲದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ. ಬಜೆಟ್ ಮುಗಿದ ಬಳಿಕ ಚನ್ನಪಟ್ಟಣದಲ್ಲಿ ಸಭೆ ನಡೆಸುತ್ತೇವೆ, ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನ ಬಿಡುವ ಪ್ರಶ್ನೆಯೇ ಇಲ್ಲ ಅಂದ್ರು.
ಇದೇ ಸಮಾವೇಶದಲ್ಲಿ ಮಾತನಾಡಿದ ಸಂಸದ ಡಿ.ಕೆ ಸುರೇಶ್, ನಿಮಗೆ ಅವಮಾನವಾಗುವಂಥಾ ಕೆಲಸ ನಾವು ಮಾಡಿಲ್ಲ, ಕೇಂದ್ರ ಸರ್ಕಾರದಿಂದ ನನ್ನ ಮೇಲೆ, ಶಿವಕುಮಾರ್ ಮೇಲೆ ಅನೇಕ ರಾಜಕೀಯ ಷಡ್ಯಂತ್ರಗಳು ನಡೆಯುತ್ತೇವೆ ಎಂದಿದ್ದಾರೆ.
ಒಟ್ಟಾರೆ, ಕಾರ್ಯಕರ್ತರ ಅಭಿನಂದನಾ ಸಮಾವೇಶದಲ್ಲಿ ಡಿಕೆ ಸಹೋದರರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜೊತೆಗೆ ಸವಾಲ್ ಕೂಡ ಹಾಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…