Featured

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ..

ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ ಬಿಟ್ಟಿಲ್ಲ, ಅವರ ವಿರುದ್ದ ಕ್ರಮ :  ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ರೇಡ್ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ರೇಡ್ ಮಾಡಿಸಿದ್ದು ನಾನೇ. ರೇಡ್ ಆಗಬೇಕಾದರೂ ಗೃಹ ಇಲಾಖೆಯ ಅನುಮತಿ ಬೇಕು. ಎರಡು ವಾರದ ಹಿಂದೆ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿದ್ದೆ. ಅಲ್ಲಿ ಕೆಲವು ಲೋಪಗಳಾಗಿದ್ದವು. ಹೀಗಾಗಿ ಮುಖ್ಯಮಂತ್ರಿಗಳ ಅನುಮತಿ ಪಡೆದು ರೇಡ್ ಮಾಡಿಸಿದೆ ಎಂದು ತಿಳಿಸಿದರು.

ಅಧಿಕಾರಿಗಳ ಮಾಹಿತಿ ಮೇರೆಗೆ ರೇಡ್ ಮಾಡಿಸಿದ್ದೇನೆ. ಈ ಅಕ್ರಮಕ್ಕೆ ಸಹಕಾರ ಕೊಟ್ಟ ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: 

ಪರಪ್ಪನ ಅಗ್ರಹಾರ ಮಾತ್ರವಲ್ಲ, ರಾಜ್ಯದ ಎಲ್ಲಾ ಕಾರಾಗೃಹಗಳ ಮೇಲೆಯೂ ಇಂತಹ ಕಾರ್ಯಾಚರಣೆ ನಡೆಯುತ್ತದೆ. ಇದನ್ನು ನಿರಂತರವಾಗಿ ಮಾಡಬೇಕು. ಕೆಲವು ಅಧಿಕಾರಿಗಳು ಇದ್ದಾರೆ, ಅವರು ತಮ್ಮ ಹಳೆ ಚಾಳಿಯನ್ನು ಬಿಟ್ಟಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಇಂತಹ ಕೆಲಸಗಳು ಯಾವಾಗಲೂ ಆಗುತ್ತಿರುತ್ತವೆ, ಹಾಗಂತ ತಕ್ಷಣ ನೇಣಿಗೆ ಹಾಕಲು ಆಗುವುದಿಲ್ಲ. ನಾನು ಖಾತೆ ತೆಗೆದುಕೊಂಡು 2 ತಿಂಗಳಲ್ಲಿ ಇಷ್ಟು ಬೇಗ ರೇಡ್ ಮಾಡಿಸಿ ಕ್ರಮ ಕೈಗೊಂಡಿದ್ದೇನೆ. ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಹಾಗೂ ಸರ್ವೀಸ್ ಡಿಸ್ಮಿಸ್ ಮಾಡಲು ಕೆಲವು ಮಾನದಂಡಗಳಿವೆ, ಅದರ ಪ್ರಕಾರವೇ ನಾವು ಕೆಲಸ ಮಾಡಬೇಕಾಗುತ್ತದೆ ಎಂದರು. ಇದನ್ನೂ ಓದಿ: ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?

ವಿಐಪಿ ಟ್ರೀಟ್‌ಮೆಂಟ್ ಯಾರಿಗೂ ಕೊಡಬಾರದು. ರೇಡ್‌ನಲ್ಲಿ ಏನೇನು ಸಿಕ್ಕಿದೆ ಎಂದು ಇಲ್ಲಿ ಚರ್ಚೆ ಮಾಡಲು ಆಗುವುದಿಲ್ಲ. ಈ ದಾಳಿಯೇ ಅಧಿಕಾರಿಗಳಿಗೆ ಒಂದು ಸೂಚನೆ. ಪ್ರಸ್ತುತ ಮಹಜರು ಪ್ರಕ್ರಿಯೆ ನಡೆಯಬೇಕು, ಅದೆಲ್ಲವೂ ಮುಗಿಯಲಿ. ಈ ವಸ್ತುಗಳು ಯಾರಿಂದ ಒಳಗೆ ಹೋದವು ಮತ್ತು ಯಾರ ಸಹಕಾರವಿತ್ತು ಎಂಬ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು” ಎಂದು ಹೇಳಿದರು.

ಇದನ್ನೂ ಓದಿ: 

“ಜೈಲಿನಲ್ಲಿ ಜಾಮರ್ ಇದೆ, ಆದರೂ ಕೆಲವು ಭಾಗಗಳಲ್ಲಿ ಅದು ಕೆಲಸ ಮಾಡುತ್ತಿಲ್ಲ. ಹೀಗಾಗಿ ಡಿಜಿಟಲ್ ವ್ಯವಸ್ಥೆಯ ಆಡಿಟ್‌ಗೆ ಸೂಚನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago