ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ತಡೆಯಲು ಕಾರಾಗೃಹ ಇಲಾಖೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ನಡುವೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ಮೊಬೈಲ್ ಹಾಗೂ ಸಿಮ್ಕಾರ್ಡ್ ಗಳು ಪತ್ತೆಯಾಗಿರುವುದು ವರದಿಯಾಗಿದೆ.
ಜೈಲು ಅಧಿಕಾರಿ ಕೊಟ್ರೇಶ್ ಪರಪ್ಪನ ಆಗ್ರಹಾರ ಠಾಣೆಗೆ ದೂರು ನೀಡಿದ್ದು ಮೂರು ಸಿಮ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಮೊಬೈಲ್ ಹಾಗೂ ಸಿಮ್ ಕಾರ್ಡ್ ಗಳು ಸಿಕ್ಕಿರುವುದರಿಂದ ಇವು ಹೇಗೆ ಒಳಗಡೆ ಬಂದವು ಎಂಬುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ಪರಪ್ಪನ ಆಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಒಂದೂವರೆ ತಿಂಗಳ ಹಿಂದೆ ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿದಾಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಹಾಗೂ ಸಿಮ್ಕಾರ್ಡ್ ಪತ್ತೆಯಾಗಿ ಸಾಕಷ್ಟು ಸುದ್ದಿಯಾಗಿತ್ತು.
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…
ಮಡ್‌ಗಾಂವ್ - ಮಂಗಳೂರು 'ವಂದೇ ಭಾರತ್' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್-ಮಡ್‌ಗಾಂವ್ ನಡುವೆ ಓಡುತ್ತಿದ್ದ…
ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…
ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…