ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ – vishwanews24
ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ಉಡುಪಿ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತಿರಸ್ಕರಿಸಿ ಆದೇಶ ನೀಡಿದೆ.
ಕೃಷ್ಣ ನಾಯ್ಕ “ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ – vishwanews24
