ಬೆಂಗಳೂರು : ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…