ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ.
ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.
ಇದಕ್ಕೆ ಸಂಬಂಧಪಟ್ಟ ಕಡತ ಈಗಾಗಲೇ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಎಲ್ಲ ಪ್ರಕ್ರಿಯೆಗಳನ್ನು ಇಂಧನ ಇಲಾಖೆ ಪೂರ್ಣಗೊಳಿಸಿದ್ದು, ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ.
ಮಾಜಿ ಉಪ ಪ್ರಧಾನಿ ದಿ. ಬಾಬು ಜಗಜೀವನ್ ರಾಮ್ ಅವರ 115 ನೇ ಜಯಂತಿ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ 40 ಯುನಿಟ್ ವಿದ್ಯುತ್ ಅನ್ನು 75 ಯುನಿಟ್ ಹೆಚ್ಚಿಸಲಾಗುವುದು ಎಂದು ಏಪ್ರೀಲ್ 5 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇಂಧನ ಇಲಾಖೆಗೆ ಕಡತ ರವಾನೆಯಾಗಿತ್ತು.
ರಾಜ್ಯದಲ್ಲಿ 75 ಯುನಿಟ್ ಒಳಗೆ ವಿದ್ಯುತ್ ಬಳಸುವ ಗೃಹ ಬಳಕೆದಾರರ ಸಂಖ್ಯೆ 1,46,65,910 ರಷ್ಟು ಇದೆ. ಈ ಪೈಕಿ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಳಕೆದಾರರ ಸಂಖ್ಯೆ 39,26,065 ರಷ್ಟು ಇದೆ. ಈ ಗ್ರಾಹಕರು ವಾರ್ಷಿಕ 1,356,92 ಮಿಲಿಯನ್ ಯುನಿಟ್ ಬಳಕೆ ಮಾಡುತ್ತಾರೆ. ಒಟ್ಟಾರೆಯಾಗಿ ಈ ಯೋಜನೆಯ ಫಲಾನುಭವಿಗಳನ್ನೂ ಒಳಗೊಂಡಂತೆ ಪರಿಶಿಷ್ಟ ಜಾತಿಯ ಗ್ರಾಹಕರಿಗೆ 694.15 ಕೋಟಿ ರೂ, ಪರಿಶಿಷ್ಟ ಪಂಗಡದ ಗ್ರಾಹಕರಿಗೆ 285.42 ಕೋಟಿ ರೂ. ಸೇರಿದಂತೆ 979 ಕೋಟಿ ರೂ.ನ್ನು ಸಬ್ಸಿಡಿ ರೂಪದಲ್ಲಿ ಇಂಧನ ಇಲಾಖೆ ನೀಡಲಿದೆ.
ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ನಿಯಮಾವಳಿ ರೂಪಿಸಿ ಆರ್ಥಿಕ ಇಲಾಖೆಗೆ ಕಳುಹಿಸಿಕೊಟ್ಟಿದೆ. ಈ ಸಬ್ಸಿಡಿ ಯೋಜನೆಗೆ 979 ಕೋಟಿ ರೂ. ಹೆಚ್ಚುವರಿ ಸಹಾಯಧನ ಅಗತ್ಯವಾಗಿದ್ದು, 75 ಯುನಿಟ್ ವರೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ. ಈ ವ್ಯವಸ್ಥೆ ಮೇ 1 ರಿಂದಲೇ ಜಾರಿಗೆ ಬರಲಿದೆ. ಈ ಪ್ರವರ್ಗದ ಗ್ರಾಹಕರಿಗೆ ಮಾಪಕ ವ್ಯವಸ್ಥೆ ಕಡ್ಡಾಯವಾಗಿರಲಿದೆ.
ಯೋಜನೆ ವ್ಯಾಪ್ತಿಗೆ ಬರಲು ಇಲಾಖೆ ನಿಯಮಗಳನ್ನು ರೂಪಿಸಿದ್ದು, ಏಪ್ರಿಲ್ ಅಂತ್ಯದೊಳಗಾಗಿ ಬಾಕಿ ವಿದ್ಯುತ್ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಿರಬೇಕಾಗುತ್ತದೆ. ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ನೀಡುವುದರಿಂದ ಗ್ರಾಹಕರು ತಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ದಾಖಲೆಯ ಜತೆಗೆ ಅಡಕಗೊಳಿಸಬೇಕಾಗುತ್ತದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…