ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ – vishwanews24
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರು ನೀಡಿದ ಬೆಂಬಲ ನೋಡಿ ನನಗೇ ಆಶ್ವರ್ಯವಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ .
ವಿಧಾನ ಪರಿಷತ್ ಗೆ ಗುರುವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಬಿ.ಕೆ.ಹರಿಪ್ರಸಾದ್, ಮಳವಳ್ಳಿ ಶಿವಣ್ಣ, ಪಿ.ವಿ.ಮೋಹನ್, ವಿನಯ್ ಕಾರ್ತಿಕ್, ತಿಪ್ಪಣ್ಣಪ್ಪ ಕಮಕನೂರು ಅವರನ್ನು ವಿಧಾನಸೌಧದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಅಭಿನಂದಿಸಿದ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ʼಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ” ಎಂದು ಹೇಳಿದರು.
ʼನಾವು ಯಾವ ಹೆಜ್ಜೆಯನ್ನ ಇಟ್ಟು ಮುಂದುವರಿಯುತ್ತಿದ್ದೆವೇಯೋ, ಅದಕ್ಕೆ ನಾವೂ ಜೊತೆಗಿದ್ದೇವೆ ಎಂದು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ಇನ್ನು ನಮ್ಮ ಪಕ್ಷದ ಶಾಸಕರೂ ಒಗ್ಗಟ್ಟಾಗಿ ಬೆಂಬಲ ನೀಡಿದ್ದಾರೆ. ನಮಗೆ ನೀಡಿದ ಬೇರೆ, ಬೇರೆ ಪಕ್ಷದ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ. ನಿಮ್ಮ ಭಾವನೆಯನ್ನು ಅರಿತುಕೊಂಡು ನಿಮ್ಮ ಸೇವೆಯಲ್ಲಿ ಮುಂದುವರೆಯುತ್ತೇವೆ. ನೀವು ನಮಗೆ ನೀಡಿದ ವಿಶ್ವಾಸ ಜನರಿಗೆ ನೀಡಿದ ಶಕ್ತಿʼ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
