Featured

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ  – vishwanews24

ಪರಿಷತ್ ನಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪದಿಸಿದ ರಾಜ್ಯ ಸರ್ಕಾರ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ಆದೇಶ

ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕೆಪಿಎಸ್ ಸಿ ಪರೀಕ್ಷಾ ದಿನಾಂಕವನ್ನು ಬದಲಿಸಿ ಶನಿವಾರ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾಗಿದ್ದ ವಿವಿಧ ಲಾಖೆಗಳಲ್ಲಿನ NON HK ವೃಂದದ 227 ಗ್ರೂಪ್ ಬಿ.ಹುದ್ದೆಗಳಿಗೆ ಆಗಸ್ಟ್ 11 ರಂದು ಹಾಗೂ HK ವೃಂದದ 50 ಗ್ರೂಪ್ ಬಿ.ಉದ್ದೆಗಳಿಗೆ 2024 ಆಗಸ್ಟ್ 25 ರಂದು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಇದೀಗ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಲಿಖಿತ ಪರೀಕ್ಷೆಯನ್ನು ಮುಂದೂಡಿ 2024 ಸೆಪ್ಟೆಂಬರ್ 14 ಮತ್ತು 15 ರಂದು ಹಾಗೂ ಅಕ್ಟೋಬರ್ 19 ಮತ್ತು 20 ರಂದು ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಮುಂದಿನ ತಿಂಗಳು ಆಗಸ್ಟ್ 25 ರಂದು ರಾಜ್ಯ ಲೋಕಸೇವಾ ಆಯೋಗವು ಕೆಪಿಎಸ್ ಸಿ ಗೆಜೆಟೆಡ್ ಪ್ರೊಭೆಷನರಿ ಹುದ್ದೆಗಳಿಗೆ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ನಿಗದಿ ಮಾಡಿತ್ತು, ಆದರೆ, ಕೇಂದ್ರ ಸರ್ಕಾರದ ಬ್ಯಾಂಕಿಂಗ್ ಪರೀಕ್ಷೆಯೂ ಕೂಡ (ಐಬಿಪಿಎಸ್) ಅದೇ ದಿನ ನಿಗದಿಯಾಗಿತ್ತು, ಒಂದೇ ದಿನ ನಡೆಯುವ ಎರಡು ಪರೀಕ್ಷೆಗಳಿಂದ 5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಅವಕಾಶಗಳಿಂದ ವಂಚಿತರಾಗಲಿದ್ದರು, ಪೂರ್ವಭಾವಿ ಪರೀಕ್ಷೆಯನ್ನು ತಕ್ಷಣ ಮುಂದೂಡಿ ಪರೀಕ್ಷಾ ದಿನಾಂಕವನ್ನು ಮರು ನಿಗದಿ ಮಾಡುವ ಮೂಲಕ ನಿರುದ್ಯೋಗಿ ಪದವೀಧರ ಅಭ್ಯರ್ಥಿಗಳ ಹಿತ ಕಾಪಾಡುವಂತೆ ಸಭಾಪತಿಗಳ ಮೂಲಕ ರಾಜ್ಯ ಸರ್ಕಾರವನ್ನು ಶುಕ್ರವಾರ ನಡೆದ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರು ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದು ಆಗ್ರಹಿಸಿದ್ದರು.

ಸರ್ಕಾರವು ದಿನಾಂಕ 11-08-2024ಕ್ಕೆ ನಿಗದಿಪಡಿಸಿದ್ದ ಪರೀಕ್ಷೆಯನ್ನು ಮುಂದೂಡಿದ್ದು,ಪದವೀಧರರ ಪರವಾಗಿ ತಮ್ಮ ಮನವಿಗೆ ಸ್ಪಂದಿಸಿದಕ್ಕೆ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ದಿನಾಂಕ 25-08-2024 ರಂದು ನಿಗದಿಪಡಿಸಿರುವ ಕೆಎಎಸ್ ಪರೀಕ್ಷೆ ಯು IBPS ಬ್ಯಾಂಕಿಂಗ್ ಪರೀಕ್ಷೆ ಮತ್ತು UGC NET ಪರೀಕ್ಷೆಯೊಂದಿಗೆ ನಿಗದಿಪಡಿಸಿದ್ದು ತಕ್ಷಣ ಸರ್ಕಾರವು ಗಮನಹರಿಸಿ ಲಕ್ಷಾಂತರ ಪದವಿಧರರ ಗೊಂದಲವನ್ನು ಪರಿಹರಿಸಬೇಕಾಗಿ ಡಾ.ಧನಂಜಯ ಸರ್ಜಿರವರು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago