Featured

ಪರಿಷತ್‌ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ ; ನಾಳೆ ಬಿಜೆಪಿಗೆ ಸೇರ್ಪಡೆ ! Vishwanews24

ಪರಿಷತ್‌ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ ; ನಾಳೆ ಬಿಜೆಪಿಗೆ ಸೇರ್ಪಡೆ !

ಬೆಂಗಳೂರು : ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿ‌ ಹಾಗೂ‌ ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.

ಬದಲಾವಣೆ ಬಗ್ಗೆ ನೋವಿದೆ. ಕಳೆದ 22 ವರ್ಷಗಳಿಂದ ಜೆಡಿಎಸ್‌ನಲ್ಲಿದ್ದೇನೆ. ದೇವೇಗೌಡರ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಅವರ ಸಹಕಾರ ಸ್ಮರಣೀಯ. ಅವರದೇ ಕುಟುಂಬ ಸದಸ್ಯನಂತೆ ನನ್ನನ್ನು ಬೆಳೆಸಿದ್ದಾರೆ. ಅವರ ಬಳಿ ತೆರಳಿ ಮಾತನಾಡುವುದಕ್ಕೆ ಧೈರ್ಯವಿಲ್ಲದ ಕಾರಣ ಅವರಿಗೆ ಪತ್ರ ಬರೆದು ರಾಜೀನಾಮೆ ವಿಷಯ ತಿಳಿಸಿದ್ದೇನೆ ಎಂದರು.

ಈಗಿನ ರಾಜಕೀಯ ಪರಿಸ್ಥಿತಿ ನೋಡಿದರೆ ಈ ಕ್ಷೇತ್ರದಲ್ಲಿ ಇರುವುದು ಸರಿಯಾದ ಆಯ್ಕೆಯಲ್ಲ ಎನಿಸುತ್ತದೆ. ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಈ ರೀತಿ ಬೇರೆ ಯಾರನ್ನೂ ದೇಶದಲ್ಲಿ ಆಯ್ಕೆ ಮಾಡಿದ್ದಿಲ್ಲ. ಅದಕ್ಕಾಗಿ ಶಿಕ್ಷಕರಿಗೆ, ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು, ಶಿಕ್ಷಕರ ಕಷ್ಟಕ್ಕೆ ಸ್ಪಂದಿಸಿದ ತೃಪ್ತಿಯಿದೆ ಎಂದರು.

ಶಿಕ್ಷಕರ ಒತ್ತಾಯದಿಂದಾಗಿ ನಾನು ಬೇರೆ ನಿರ್ಧಾರ ತೆಗೆದುಕೊಂಡಿದ್ದೇನೆ. ಪಕ್ಷ ಬದಲಾವಣೆಯೂ ನನಗೆ ಅನಿವಾರ್ಯವಾಗಿದೆ. ಆದರೆ ಇದು ಅಧಿಕಾರಕ್ಕಾಗಿ ಅಲ್ಲ. ಯಾವ ಪಕ್ಷದಿಂದ ಸ್ಪರ್ಧಿಸಿದರೂ ಎಂಎಲ್‌ಸಿ ಆಗಬಲ್ಲೆ ಎಂಬ ಧೈರ್ಯ ನನಗಿದೆ ಎಂದು ಹೊರಟಿ ತಿಳಿಸಿದರು.

ಇನ್ನು ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…

7 minutes ago

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…

12 minutes ago

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…

17 minutes ago

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ – vishwanews24

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ      ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ…

28 minutes ago

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

18 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

19 hours ago