Featured

ಪರಿಸರ ನಿಯಮ ಉಲ್ಲಂಘನೆ ಆರೋಪ : ಬಿಗ್‌ ಬಾಸ್‌ ಮನೆಗೆ ಬೀಗ – vishwanews24

ಪರಿಸರ ನಿಯಮ ಉಲ್ಲಂಘನೆ ಆರೋಪ : ಬಿಗ್‌ ಬಾಸ್‌ ಮನೆಗೆ  ಬೀಗ

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು.

ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಪರಿಸರ ನಿಯಮ ಉಲ್ಲಂಘನೆ ಆರೋಪಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್‌ ಒಳಗೆ ಪರಿಶೀಲನೆ ನಡೆಸಿದರು.

ನೋಟಿಸ್ ತೆಗೆದುಕೊಳ್ಳಲು ಜಾಲಿವುಡ್ ಆಡಳಿತ ಮಂಡಳಿ ನಕಾರ ಮಾಡಿತು. ಆಗ ಜಾಲಿವುಡ್ ಸ್ಟುಡಿಯೋಸ್‌ ಸಿಬ್ಬಂದಿಯನ್ನು ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡರು. ನೋಟಿಸ್ ಸ್ವೀಕರಿಸೋದಕ್ಕೆ ಬರಲು ಅರ್ಧ ಗಂಟೆ ಬೇಕಾ ಎಂದು ಗರಂ ಆದರು.

ಕೂಡಲೇ ನೋಟೀಸ್ ತೆಗೆದುಕೊಳ್ಳಿ. ಅಧಿಕೃತವಾಗಿ ಇಂದು ಸೀಜ್ ಮಾಡ್ತೀವಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಜೆ 7 ಗಂಟೆ ವರೆಗೂ ಎಕ್ಸಿಟ್ ಗೇಟ್ ಓಪನ್ ಮಾಡಿಕೊಳ್ಳಿ. ಕೂಡಲೇ ಜಾಲಿವುಡ್ ಸ್ಟುಡಿಯೋ ಕ್ಲೋಸ್ ಮಾಡುವಂತೆ ಸೂಚನೆ ನೀಡಿದರು.

ಕೊನೆಗೆ ಜಾಲಿವುಡ್ ಆಡಳಿತ ಮಂಡಳಿ ನೋಟಿಸ್‌ ಸ್ವೀಕರಿಸಿತು. ನಾಳೆಯಿಂದ ಜಾಲಿವುಡ್ ಸ್ಟುಡಿಯೋಸ್‌ ಯಾವುದೇ ಕಾರ್ಯಾಚರಣೆ ಮಾಡಬಾರದು. ಎಲ್ಲಾ ರೀತಿಯ ಕಾರ್ಯಚಟುವಟಿಕೆ ಸ್ಥಗಿತ ಮಾಡುವಂತೆ ಸೂಚನೆ ನೀಡಲಾಯಿತು. ಸ್ಟುಡಿಯೋಸ್‌ ಸ್ವತಃ ತಾವೇ ನಿಂತು ತಹಶೀಲ್ದಾರ್‌ ಬೀಗ ಹಾಕಿದರು. ಬಿಗ್‌ ಬಾಸ್‌ ಸ್ಥಗಿತಕ್ಕೂ ಸೂಚನೆ ನೀಡಿದರು

Vishwa News 24

Recent Posts

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

4 minutes ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago