ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಬಂಧನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟ ಹೇಗಿರಬೇಕು ಎಂಬ ಮಾಹಿತಿ ನೀಡುವ ‘ಟೂಲ್‌ ಕಿಟ್‌’ ನ್ನು ದಿಶಾ ರವಿ ಹಂಚಿದ್ದರು. ಈ ಆರೋಪದಡಿಯಲ್ಲಿ ಬೆಂಗಳೂರಿನ ಪರಿಸರವಾದಿ ದಿಶಾ ರವಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಕರ್ನಾಟಕದಲ್ಲಿರುವುದು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ : ಹೆಚ್.ಡಿ. ಕುಮಾರಸ್ವಾಮಿ -Vishwanews24

ಈ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದ ಸಿದ್ದರಾಮಯ್ಯ, ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ಎನ್ನುವ ಪ್ರಧಾನಿನರೇಂದ್ರ ಮೋದಿ ಶಿಕ್ಷಿತ ಹೆಣ್ಣುಮಕ್ಕಳು ತಮ್ಮನ್ನು ಪ್ರಶ್ನಿಸಿದರೆ ಬಂಧಿಸಿ ಜೈಲಿಗೆ ಹಾಕುತ್ತಾರೆ.

ದಿಶಾ ರವಿ ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ, ಮಹಿಳೆಯರ ಮೇಲಿನ ದೌರ್ಜನ್ಯವೂ ಹೌದು, ನೆನಪಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ನಾರಿ‌ ಮುನಿದರೆ ಮಾರಿ ಎಂಬ ಒಕ್ಕಣೆಯನ್ನು ತಮ್ಮ ಟ್ವೀಟ್ ನಲ್ಲಿ ಸೇರಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯಾಗಿ ನಟ ದರ್ಶನ್‌ ಆಯ್ಕೆ -Vishwanews24