ಬೆಳಗಾವಿ: ‘ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ 14ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಅನುದಾನ ಸಿಗುವಂತೆ ಮಾಡಲಾಗಿದೆ. ಹೀಗಾಗಿ, ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರದ ಮೊರೆ ಹೋಗಬೇಕಿಲ್ಲ’ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅತಿವೃಷ್ಟಿಯಾದ ಸಂದರ್ಭಗಳಲ್ಲಿ ರಾಜ್ಯವು ಕೇಂದ್ರದ ಕದ ತಟ್ಟದಿರಲೆಂಬ ಉದ್ದೇಶದಿಂದ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ, ಪರಿಹಾರದ ಹಣಕ್ಕಾಗಿ ಹಿಂದಿನಂತೆ ಕೇಂದ್ರಕ್ಕೆ ಹೋಗುವ ಅಗತ್ಯವಿಲ್ಲ. ಆರ್ಥಿಕವಾಗಿ ಸದೃಢವಾಗಿರುವ ರಾಜ್ಯ ಸರ್ಕಾರವೇ ನೆರೆ ಪರಿಹಾರ ಘೋಷಿಸಿದೆ’ ಎಂದು ಸಮರ್ಥಿಸಿಕೊಂಡರು.
‘ರಕ್ಷಣಾ ಕಾರ್ಯಕ್ಕೆ ಬಂದಿದ್ದ ಎನ್.ಡಿ.ಆರ್.ಎಫ್ ತಂಡ ಹಾಗೂ ಸೇನೆಯನ್ನು ಕೇಂದ್ರ ಕಳುಹಿಸಿದೆ. ವೈಮಾನಿಕ ಸಮೀಕ್ಷೆ ನಡೆಸಿದ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಕೇಂದ್ರದ ಪ್ರತಿನಿಧಿಗಳು. ಈ ವಯಸ್ಸಿನಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎನ್ನುವುದು ಸರಿಯಲ್ಲ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವೆರಿಗೆ ತಿರುಗೇಟು ನೀಡಿದರು.
‘ಪ್ರವಾಹವನ್ನೇ ನೆಪವಾಗಿಟ್ಟುಕೊಂಡು ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಹಣ ನೀಡುತ್ತಿದೆ. ಕೇಂದ್ರವೇ ಘೋಷಿಸಬೇಕೆಂಬ ಹಠ ಕಾಂಗ್ರೆಸ್‌ನವರಿಗೇಕೆ? ಹಾನಿಯ ವರದಿ ಸಲ್ಲಿಸಲಾಗಿದ್ದು, ಕೇಂದ್ರವೂ ಸ್ಪಂದಿಸುವ ಭರವಸೆ ಇದೆ. ಎರಡೂ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ’ ಎಂದು ಪ್ರತಿಕ್ರಿಯಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…