Featured

ಪರಿಹಾರ ಕೇಂದ್ರದಲ್ಲಿ ಸಚಿವ ಹೆಚ್‌.ಡಿ.ರೇವಣ್ಣ ಅಮಾನವವೀಯ ವರ್ತನೆ ; ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

ಬೆಂಗಳೂರು: ಮಳೆಯ ಆರ್ಭಟದಿಂದ ಕೊಡಗು ಜನರ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅಧಿಕಾರದ ಮದದಲ್ಲಿ ಸಚಿವರೊಬ್ಬರು ಕೊಡಗು ಪ್ರವಾಹದ ನಿರಾಶ್ರಿತರಿಗೆ ತಿಂಡಿ, ತಿನಿಸುಗಳನ್ನು ಎಸೆಯುವ ಮೂಲಕ ಮಾನವೀಯತೆಯನ್ನು ಮರೆತಿದ್ದಾರೆ.

ಸೂಪರ್ ಸಿಎಂ ಎಂದೇ ಬಿಂಬಿತರಾಗಿರುವ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.

ರೇವಣ್ಣ ಅವರು ಬಂದಿದ್ದು, ನಮ್ಮ ಕಷ್ಟವನ್ನು ಆಲಿಸುತ್ತಾರೆ ಅಂತಾ ನಿರಾಶ್ರಿತರು ಸಚಿವರನ್ನು ಮುತ್ತಿಕೊಂಡಿದ್ದರು. ಈ ವೇಳೆ ರೇವಣ್ಣ ಸಂತ್ರಸ್ತರಿಗೆ ಕೊಡಲು ಒಂದು ಬಾಕ್ಸ್ ಬಿಸ್ಕೆಟ್ ತಂದಿದ್ದರು ಅದನ್ನು ಅಮಾನವೀಯತೆಯಿಂದ ಎಸೆದಿದ್ದಾರೆ. ರೇವಣ್ಣ ಅವರು ಬಿಸ್ಕೆಟ್ ಎಸೆಯುತ್ತಿದ್ದರೆ ಪಕ್ಕದಲ್ಲೇ ನಿಂತಿದ್ದ ಎ.ಟಿ ರಾಮಸ್ವಾಮಿ ಮೂಕಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು.

ಶಿಬಿರದಲ್ಲಿ ಸುಮಾರು 100 ಜನರು ಇದ್ದರು ಅಷ್ಟೇ. ಈಗಾಗಲೇ ಎಲ್ಲರಿಗೂ ಜಿಲ್ಲಾಧಿಕಾರಿ ಮತ್ತು ತಾಲೂಕು ಸದ್ಯರೆಲ್ಲರೂ ಆಶ್ರಯ ನೀಡಿದ್ದರು. ನಮ್ಮ ಕ್ಷೇತ್ರ ಏನೋ ಬರುಬೇಕು ಎಂದು ಪ್ರಚಾರಕ್ಕಾಗಿ ಮತ್ತು ಕಾಟಚಾರಕ್ಕಾಗಿ ಬಂದು ಬಿಸ್ಕೆಟ್ ಎಸೆದು ಹೋಗಿದ್ದಾರೆ. ಅಲ್ಲೇ ಪಕ್ಕದಲ್ಲಿದ್ದ ರಾಮಸ್ವಾಮಿ ಅವರು ಸುಮ್ಮನೆ ನೋಡುತ್ತಾ ನಿಂತಿದ್ದರು. ರೇವಣ್ಣ ಅವರು ನಡೆ ನಿಜಕ್ಕೂ ಬೇಸರವಾಯಿತು ಎಂದು ಸ್ಥಳೀಯ ಗಣೇಶ್  ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೂರು ದಿನಗಳಿಂದ ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಿ ಜನರ ಬಳಿ ಸ್ವತಃ ಅವರೇ ಕಷ್ಟವನ್ನು ಆಲಿಸುತ್ತಿದ್ದಾರೆ. ಆದರೆ ರೇವಣ್ಣ ಅಧಿಕಾರ ಮದದಲ್ಲಿ ಈ ರೀತಿಯಾಗಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago