ಬೆಂಗಳೂರು: ಮಳೆಯ ಆರ್ಭಟದಿಂದ ಕೊಡಗು ಜನರ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅಧಿಕಾರದ ಮದದಲ್ಲಿ ಸಚಿವರೊಬ್ಬರು ಕೊಡಗು ಪ್ರವಾಹದ ನಿರಾಶ್ರಿತರಿಗೆ ತಿಂಡಿ, ತಿನಿಸುಗಳನ್ನು ಎಸೆಯುವ ಮೂಲಕ ಮಾನವೀಯತೆಯನ್ನು ಮರೆತಿದ್ದಾರೆ.
ಸೂಪರ್ ಸಿಎಂ ಎಂದೇ ಬಿಂಬಿತರಾಗಿರುವ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.
ರೇವಣ್ಣ ಅವರು ಬಂದಿದ್ದು, ನಮ್ಮ ಕಷ್ಟವನ್ನು ಆಲಿಸುತ್ತಾರೆ ಅಂತಾ ನಿರಾಶ್ರಿತರು ಸಚಿವರನ್ನು ಮುತ್ತಿಕೊಂಡಿದ್ದರು. ಈ ವೇಳೆ ರೇವಣ್ಣ ಸಂತ್ರಸ್ತರಿಗೆ ಕೊಡಲು ಒಂದು ಬಾಕ್ಸ್ ಬಿಸ್ಕೆಟ್ ತಂದಿದ್ದರು ಅದನ್ನು ಅಮಾನವೀಯತೆಯಿಂದ ಎಸೆದಿದ್ದಾರೆ. ರೇವಣ್ಣ ಅವರು ಬಿಸ್ಕೆಟ್ ಎಸೆಯುತ್ತಿದ್ದರೆ ಪಕ್ಕದಲ್ಲೇ ನಿಂತಿದ್ದ ಎ.ಟಿ ರಾಮಸ್ವಾಮಿ ಮೂಕಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು.
ಶಿಬಿರದಲ್ಲಿ ಸುಮಾರು 100 ಜನರು ಇದ್ದರು ಅಷ್ಟೇ. ಈಗಾಗಲೇ ಎಲ್ಲರಿಗೂ ಜಿಲ್ಲಾಧಿಕಾರಿ ಮತ್ತು ತಾಲೂಕು ಸದ್ಯರೆಲ್ಲರೂ ಆಶ್ರಯ ನೀಡಿದ್ದರು. ನಮ್ಮ ಕ್ಷೇತ್ರ ಏನೋ ಬರುಬೇಕು ಎಂದು ಪ್ರಚಾರಕ್ಕಾಗಿ ಮತ್ತು ಕಾಟಚಾರಕ್ಕಾಗಿ ಬಂದು ಬಿಸ್ಕೆಟ್ ಎಸೆದು ಹೋಗಿದ್ದಾರೆ. ಅಲ್ಲೇ ಪಕ್ಕದಲ್ಲಿದ್ದ ರಾಮಸ್ವಾಮಿ ಅವರು ಸುಮ್ಮನೆ ನೋಡುತ್ತಾ ನಿಂತಿದ್ದರು. ರೇವಣ್ಣ ಅವರು ನಡೆ ನಿಜಕ್ಕೂ ಬೇಸರವಾಯಿತು ಎಂದು ಸ್ಥಳೀಯ ಗಣೇಶ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೂರು ದಿನಗಳಿಂದ ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಿ ಜನರ ಬಳಿ ಸ್ವತಃ ಅವರೇ ಕಷ್ಟವನ್ನು ಆಲಿಸುತ್ತಿದ್ದಾರೆ. ಆದರೆ ರೇವಣ್ಣ ಅಧಿಕಾರ ಮದದಲ್ಲಿ ಈ ರೀತಿಯಾಗಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…