ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರು ಹಿಜಬ್ ಧರಿಸಿ ಹಾಜರಾಗುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮೌಖಿಕ ನಿರ್ದೇಶನ ನೀಡಿದೆ.
ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರಿಗೆ ಸದ್ಯ ಯಾವುದೇ ಡ್ರೆಸ್ ಕೋಡ್ ಅನ್ನು ನೀಡಲಾಗಿಲ್ಲ. ಆದರೂ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.
ಉಪನ್ಯಾಸಕರು ಹಿಜಬ್ ತೆಗೆದು ಪರೀಕ್ಷಾ ಕೆಲಸಕ್ಕೆ ಹಾಜರಾದರೆ ಮಾತ್ರವೇ ಅವರಿಗೆ ಕೆಲಸಕ್ಕೆ ಅವಕಾಶ ನೀಡಬೇಕು. ಒಂದು ವೇಳೆ ಉಪನ್ಯಾಸಕರು ಹಿಜಬ್ ತೆಗೆಯದೇ ಬಂದಲ್ಲಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲು ಇಲಾಖೆ ನಿರ್ಧರಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾದ ಮೊದಲ ದಿನ ಶಿಕ್ಷಕಿಯೊಬ್ಬರು ಹಿಜಬ್ ಧರಿಸಿ ಬಂದಿದ್ದ ಘಟನೆ ನಡೆದಿತ್ತು. ಆ ಸಂದರ್ಭ ಶಿಕ್ಷಕಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿತ್ತು. ಮುಂದೆಯೂ ಈ ರೀತಿ ನಡೆದಲ್ಲಿ ಇದೇ ನಿಯಮ ಮುಂದುವರಿಸುವಂತೆ ತಿಳಿಸಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಏಪ್ರಿಲ್ ಅಂತ್ಯದಿಂದ ಪ್ರಾರಂಭವಾಗಲಿರುವ ದ್ವೀತಿಯ ಪಿಯುಸಿ ಪರೀಕ್ಷೆಗೂ ಈ ನಿಯಮ ಅನ್ವಯವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…