Featured

ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು :  ಸಿಬಿಐ – Vishwanews24

ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು :  ಸಿಬಿಐ

ಉತ್ತರ ಕನ್ನಡ: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ – Vishwanews24

ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ವರದಿ ಸಲ್ಲಿಸಿದೆ.

ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಪರೇಶ್‌ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’ ಎಂದಿದ್ದಾರೆ. ‘ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

9 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

13 hours ago