Featured

ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ – Vishwanews24

ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತಾ ಸಾವನ್ನಪ್ಪುವ ಮೊದಲು ಕುಮಟಾದಲ್ಲಿ ನಡೆದ ಆಗಿನ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೂ ಹೋಗಿ ಬಂದಿದ್ದ ವಿಚಾರ ಸಿಬಿಐ(CBI) ತನಿಖೆಯಿಂದ ದೃಢಪಟ್ಟಿದೆ.

ಕುಮಟಾದಲ್ಲಿ ಡಿಸೆಂಬರ್‌ 6 ರಂದು ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಮೇಸ್ತಾ ಹೋಗಿದ್ದ. ಸುಮಾರು 25 ಕಿ.ಮೀ. ಪ್ರಯಾಣಿಸಿ ಸ್ನೇಹಿತರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ ಪರೇಶ್‌ ಮೇಸ್ತಾ ಮನೆಗೆ ಬಂದಿದ್ದ. ನಂತರ ಮನೆಯಿಂದ ಸ್ನೇಹಿತರನ್ನು ಭೇಟಿ ಮಾಡಲು ಹೋಗಿದ್ದ ಎಂಬ ವಿಚಾರ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿ ಲಭ್ಯವಾಗಿದೆ. ಮೇಸ್ತಾ ಒಡನಾಡಿಗಳು, ಆತನ ಸ್ನೇಹಿತರು, ಘಟನೆ ನಡೆದ ಸಿಸಿಟಿವಿ ದೃಶ್ಯ, ಮೊಬೈಲ್‌ ಲೋಕೇಶನ್‌ ಸೇರಿ ಸಾಕಷ್ಟು ಸಾಕ್ಷ್ಯಗಳನ್ನು ಕೋರ್ಟ್‌ಗೆ ಸಲ್ಲಿಸಿದೆ. ದೀಪಾವಳಿ ಸಂಭ್ರಮ : ಕರ್ನಾಟಕದಲ್ಲಿ ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ – Vishwanews24

ಪರೇಶ್‌ ಮೇಸ್ತಾ ಯಾವ ಹುಡುಗಿಯನ್ನೂ ಪ್ರೀತಿಸುತ್ತಿರಲಿಲ್ಲ. ಶಬರಿಮಲೆಗೆ ಹೋಗಲು ತಂದೆಯ ಒಪ್ಪಿಗೆ ಪಡೆದುಕೊಂಡಿದ್ದ ವಿಚಾರವು ವರದಿಯಲ್ಲಿದೆ.

ಸಿಬಿಐ ಪರೇಶ್‌ ಮೇಸ್ತಾ ಅವರ ಆಪ್ತ ಸ್ನೇಹಿತರ ಹೇಳಿಕೆಯನ್ನು ದಾಖಲಿಸಿದೆ. ಪರೇಶ್‌ ಮೇಸ್ತ ಕೆಲವೊಮ್ಮೆ ಮದ್ಯ ಸೇವಿಸಿಯೂ ಮನೆಗೆ ಬರುತ್ತಿದ್ದ. ಆಗಾಗ ಸ್ನೇಹಿತನ ಮನೆಯಲ್ಲಿಯೇ ಇರುತ್ತಿದ್ದ. ಸ್ನೇಹಿತರ ಜತೆ ಸೇರಿಸಿಕೊಂಡು ಮೀನು ವ್ಯಾಪಾರ ಮಾಡುತ್ತಿದ್ದ ಎನ್ನುವುದು ಸೇರಿದಂತೆ ಅನೇಕ ಮಹತ್ವದ ವಿಷಯಗಳನ್ನು ಸಿಬಿಐ ತನಿಖೆ ತೆರೆದಿಟ್ಟಿದೆ.

ಹೊನ್ನಾವರದಲ್ಲಿ 2017ರ ಡಿಸೆಂಬರ್ 6ರಂದು ನಡೆದ ಕೋಮುಗಲಭೆಯಲ್ಲಿ ನಾಪತ್ತೆಯಾಗಿದ್ದ ಮೇಸ್ತಾ ಎರಡು ದಿನಗಳ ಬಳಿಕ ಶೆಟ್ಟಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಬಿಜೆಪಿ ಸೇರಿ ಹಿಂದೂಪರ ಸಂಘಟನೆಗಳು ಅನ್ಯ ಕೋಮಿನವರೇ ಪರೇಶ ಮೇಸ್ತಾನನ್ನು ಚಿತ್ರಹಿಂಸೆ ಕೊಟ್ಟು ಕೊಂದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿತ್ತು.

ಮಂಗಳೂರು: ಹಲಾಲ್ ಮುಕ್ತ ದೀಪಾವಳಿ.. ಹಲಾಲ್ ಉತ್ಪನ್ನ ಬಹಿಷ್ಕರಿಸಲು ಹಿಂದೂ ಸಂಘಟನೆಗಳ ಕರೆ – Vishwanews24

ಬಿಜೆಪಿ ನಾಯಕರ ಆಗ್ರಹದಂತೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದ ಸಿಬಿಐ ಕೆಲ ದಿನಗಳ ಹಿಂದೆಯಷ್ಟೇ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ ಪರೇಶ್ ಮೇಸ್ತಾ ಅವರ ತಂದೆ ಆ ವರದಿಗೆ ಆಕ್ಷೇಪ ಎತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ. ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ಮುಖಂಡರು ಮರು ತನಿಖೆಗೆ ಆಗ್ರಹಿಸುವುದಾಗಿಯೂ ಹೇಳಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago