ಪರ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಬಡಗುಬೆಟ್ಟು ಹಾಗೂ ಮಾಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ತಿರುವಿನಲ್ಲಿ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಮೃತಪಟ್ಟ ಘಟನೆ ನಡೆದಿದೆ.
ಆ.19 ರಂದು ನಡೆದ ಅವಘಡದಲ್ಲಿ ಪಾದಚಾರಿ ಅಶೋಕ್ ಶೆಟ್ಟಿಗಾರ್(64) ತಲೆಗೆ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಮೃತಪಟ್ಟಿದ್ದಾರೆ.
ಈ ಪ್ರದೇಶದಲ್ಲಿ ದಿನನಿತ್ಯ ಎಂಬಂತೆ ಅಪಘಾತ ನಡೆಯುತ್ತಿದ್ದು, ಈಗಾಗಲೇ ಮೂರು ಅಪಘಾತದಿಂದ ಪ್ರಾಣಕಳೆದುಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗೆ ರಾತ್ರಿ ಹೊತ್ತು ಬೆಳಕು ಚೆಲ್ಲುವ ಬ್ಯಾರಿಕೆಗಳನ್ನು ಅಳವಡಿಸಬೇಕು. ಬಡಗುಬೆಟ್ಟಿನಿಂದ ಪರ್ಕಳಕ್ಕೆ ಸೇರುವ ಕೂಡೂ ರಸ್ತೆಗೆ ಉಬ್ಬು ನಿರ್ಮಾಣ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮೃತರು ಎಂಐಟಿಯ ನಿವೃತ್ತ ಉದ್ಯೋಗಿಯಾಗಿದ್ದು. ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಮಿತರನ್ನು ಅಗಲಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…