ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಆತ್ರಾಡಿಯಿಂದ ಪೇಪರ್ ಬಾಕ್ಸ್ ಗಳನ್ನು ತುಂಬಿ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿದ್ದ ಲಾರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರ್ಕಳದ ಈ ಪ್ರದೇಶದಲ್ಲಿ ಬೃಹತ್ ವಾಹನಗಳು ಕೆಟ್ಟು ನಿಲ್ಲುರುವುದು, ಅಪಘಾತಗಳು ನಡೆಯುತ್ತಿರುವುದು ಸರ್ವೇಸಾಮಾನ್ಯವಾಗಿದೆ.
ಲಾರಿಯಿಂದ ಡೀಸೆಲ್ ಸೋರಿಕೆಯಾಗಿದೆ. ತತ್ ಕ್ಷಣ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಲಾಗಿದೆ.ಯಾರೊಬ್ಬರಿಗೂ ಗಾಯವಾದ ಬಗ್ಗೆ ವರದಿಯಾಗಿಲ್ಲ. ಎರಡು ದಿನಗಳ ಹಿಂದಷ್ಟೇ ಏರು ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ವಾಹನ ಸವಾರರು ಪರದಾಡಬೇಕಾಗಿತ್ತು.
ಸಾರ್ವಜನಿಕರ ಆಕ್ರೋಶ
ಜನಪ್ರತಿನಿಧಿಗಳು, ಜಿಲ್ಲಾಡಳಿತ ವಾಹನ ಚಾಲಕರಿಗೆ, ಮಾಲಕರಿಗಾಗುವ ನಷ್ಟವನ್ನು ಮನಗಂಡು ಶೀಘ್ರ ಹಳೆ ರಸ್ತೆಯನ್ನಾದರೂ ಅಭಿವೃದ್ಧಿಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಿರಂತರ ವಾಹನ ಚಾಲಕರಿಗೆ ನಷ್ಟವನ್ನು ಉಂಟು ಮಾಡುವ ರಸ್ತೆಗೆ ಪೂರ್ಣ ಪ್ರಮಾಣದ ಕಾಯಕಲ್ಪವಾಗಬೇಕು , ಮತ್ತು ಪದೇ ಪದೇ ಈ ರೀತಿ ವಾಹನ ಚಾಲಕರಿಗೆ ಮಾಲಕರಿಗೆ ಆಗುವ ನಷ್ಟ ಭರಿಸುವವರು ಯಾರು ಎಂದು ಅಳಲು ತೋಡಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…