Categories: ಉಡುಪಿ

ಪರ್ಯಾಯಕ್ಕೆ ಉಡುಪಿ ನಗರಸಭೆ ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ : ಯಶ್ಪಾಲ್ ಸುವರ್ಣ – vishwanews24

ಪರ್ಯಾಯಕ್ಕೆ ಉಡುಪಿ ನಗರಸಭೆ ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ : ಯಶ್ಪಾಲ್ ಸುವರ್ಣ

ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬ ದಸರಾ ಮಾದರಿಯಲ್ಲಿ ಸಂಭ್ರಮಾಚರಣೆ ನಡೆಸುವ ಉದ್ದೇಶದಿಂದ ಈ ಬಾರಿಯ ಪರ್ಯಾಯ ಮಹೋತ್ಸವದಿಂದ ಉಡುಪಿಯ ನಗರ ಸಭೆ ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ನಗರದ ಮುಖ್ಯ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಅನುದಾನ ಮೀಸಲಿಡಿಸುವ ಮೂಲಕ ಪರ್ಯಾಯ ಉತ್ಸವಕ್ಕೆ ವಿಶೇಷ ಮೆರುಗು ನೀಡಲಾಗುವುದು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ದಸರಾ ಮಹೋತ್ಸವ ಸಂದರ್ಭದಲ್ಲಿ ಮೈಸೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿದ್ಯುತ್ ದೀಪಾಲಂಕಾರ ನಡೆಸುವ ಮಾದರಿಯಲ್ಲೇ ಈ ಬಾರಿಯಿಂದ ಮುಂದಿನ ಎಲ್ಲಾ ಪರ್ಯಾಯ ಮಹೋತ್ಸವಕ್ಕೆ ಉಡುಪಿ ನಗರ ಸಭೆಯಿಂದಲೇ ಅನುದಾನ ಮೀಸಲಿಡಲು ನಿರ್ಣಯ ಮಾಡಲಾಗಿದೆ.

ವಿಶ್ವಪ್ರಸಿದ್ಧ ಪರ್ಯಾಯ ಮಹೋತ್ಸವಕ್ಕೆ ದೇಶ ವಿದೇಶದಿಂದ ಆಗಮಿಸುವ ಸಾವಿರಾರು ಭಕ್ತಾದಿಗಳು ಉಡುಪಿಗೆ ಭೇಟಿ ನೀಡುವ ಹಿನ್ನೆಲೆ ನಗರ ಅಲಂಕಾರಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು‌,‌ ಈಗಾಗಲೇ ಪರ್ಯಾಯ ಪೂರ್ವಭಾವಿಯಾಗಿ ಉಡುಪಿ ನಗರದ ರಸ್ತೆ, ಚರಂಡಿ, ಸ್ವಚ್ಚತೆ ಸಹಿತ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ 25 ಕೋಟಿ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರಕಾರಕ್ಕೆ ಹಾಗೂ ತುರ್ತು ಕಾಮಗಾರಿಗ ಉಡುಪಿ ನಗರಸಭೆ ವತಿಯಿಂದ 5 ಕೋಟಿ ಮೀಸಲಿರಿಸುವಂತೆ ಮನವಿ ಮಾಡಿರುವುದಾಗಿ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago