ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತ ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಆದ್ರೆ ವೆಂಕಟೇಶ್ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…