ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಶಿಷ್ಯ ಸ್ವೀಕಾರಕ್ಕೆ ಶೈಲೇಶ್ ಉಪಾಧ್ಯಾಯ ನೇಮಕ – Vishwanews24
ಉಡುಪಿ: ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಶಿಷ್ಯ ಸ್ವೀಕಾರಕ್ಕೆ ನಿರ್ಧರಿಸಿದ್ದು, ಪಲಿಮಾರು ಮೂಲ ಮಠದಲ್ಲಿರುವ ಯೋಗ ದೀಪಿಕಾ ಗುರುಕುಲದ ವಿದ್ಯಾರ್ಥಿ ಶೈಲೇಶ್ ಉಪಾಧ್ಯಾಯ ಅವರು ಮಠದ ಉತ್ತರಾಧಿಕಾರಿಯಾಗಿ ನೇಮಕವಾಗಲಿದ್ದಾರೆ.
ಶಿಬರೂರಿನಲ್ಲಿ 1956ರಲ್ಲಿ ಜನಿಸಿದ ಪಲಿಮಾರು ಸ್ವಾಮೀಜಿಯವರಿಗೆ ಪ್ರಸಕ್ತ 63 ವರ್ಷವಾಗಿದ್ದು, ತಮ್ಮ ಎರಡನೇ ಪರ್ಯಾಯ ಅವಧಿಯಲ್ಲಿ ಶಿಷ್ಯ ಸ್ವೀಕಾರ ಮಾಡುತ್ತಿದ್ದಾರೆ. 1974ರಲ್ಲಿ ವಿದ್ಯಾಮಾನ್ಯ ತೀರ್ಥರ ಉತ್ತರಾಧಿಕಾರಿಯಾಗಿ ಸನ್ಯಾಸ ಸ್ವೀಕರಿಸಿದ ಶ್ರೀ ವಿದ್ಯಾಧೀಶ ಸ್ವಾಮೀಜಿಯವರು ಅನೇಕ ಜನಪರ ಯೋಜನೆಗಳ ಮೂಲಕ ಹೆಸರು ಮಾಡಿದ್ದಾರೆ.
ಪಲಿಮಾರು ಶ್ರೀ ವಿದ್ಯಾಮಾನ್ಯ ತೀರ್ಥರ ಉತ್ತರಾಧಿಕಾರಿಯಾಗಿ ಸನ್ಯಾಸತ್ವ ಸ್ವೀಕರಿಸಿದ್ದ ಪಲಿಮಾರು ಶ್ರೀಗಳಿಗೆ 63 ವರ್ಷ ವಯಸ್ಸಾಗಿದೆ. ಇವರ ಉತ್ತರಾಧಿಕಾರಿಯಾಗಿ ನೇಮಕವಾಗಲಿರುವ ವಿದ್ಯಾರ್ಥಿ ಶೈಲೇಶ್ ಉಪಾಧ್ಯಾಯ ಕೊಡವೂರು ಕಂಬಳಕಟ್ಟದವರಾಗಿದ್ದಾರೆ. ಇವರು 4 ನೇ ವರ್ಷದ ವೇದಾಧ್ಯಯನ ಮಾಡುತ್ತಿದ್ದು, ಸನ್ಯಾಸ ಸ್ವೀಕರಿಸಿದ ನಂತರ ಪಲಿಮಾರು ಶ್ರೀಗಳಲ್ಲಿ ಉನ್ನತ ಅಧ್ಯಯನ ಮುಂದುವರಿಸಲಿದ್ದಾರೆ.
