ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು, ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಗೌಹಾಟಿ ಹೈಕೋರ್ಟ್ ನೀಡಿದ್ದ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ. ಎಸ್. ಚಂದೂರ್ಕರ್ ಅವರಿದ್ದ ಪೀಠವು ಈ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಸಂದರ್ಭಗಳನ್ನು ಪರಿಗಣಿಸಿದಾಗ ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಸಂದರ್ಭಗಳಲ್ಲಿ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವುದು ಅತ್ಯಗತ್ಯ ಎಂದು ನ್ಯಾಯಾಲಯ ಹೇಳಿದೆ. ಈ ತೀರ್ಪಿನಿಂದ ಖೇರಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ದೊರೆತಿದೆ.
ಇದನ್ನೂ ಓದಿ:
ಈ ಪ್ರಕರಣಕ್ಕೆ ಕಾರಣವಾಗಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಖೇರಾ ಮಾಡಿದ್ದ ಆರೋಪಗಳು. ವಿದೇಶಗಳಲ್ಲಿ ಅನೇಕ ಪಾಸ್‌ಪೋರ್ಟ್‌ಗಳು ಮತ್ತು ಅಮೆರಿಕದಲ್ಲಿ ಬಹಿರಂಗಪಡಿಸದ ಆಸ್ತಿಗಳಿವೆ ಎಂದು ಖೇರಾ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಮಾನನಷ್ಟ, ನಕಲಿ ದಾಖಲೆ ಸೃಷ್ಟಿ ಹಾಗೂ ಕ್ರಿಮಿನಲ್ ಪಿತೂರಿಯ ಆರೋಪಗಳಡಿ ಎಫ್‌ಐಆರ್ ದಾಖಲಿಸಲಾಗಿತ್ತು.
ಪ್ರಕರಣದ ವಿಚಾರಣೆಯಲ್ಲಿ ಈಗಾಗಲೇ ಹಲವು ತಿರುವುಗಳು ಕಂಡುಬಂದಿವೆ. ಏಪ್ರಿಲ್ 10ರಂದು ತೆಲಂಗಾಣ ಹೈಕೋರ್ಟ್ ಖೇರಾ ಅವರಿಗೆ ಒಂದು ವಾರದ ಸಾರಿಗೆ ಜಾಮೀನು ನೀಡಿತ್ತು. ಬಳಿಕ ಅಸ್ಸಾಂ ಸರ್ಕಾರ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆ ಆದೇಶಕ್ಕೆ ತಡೆ ನೀಡಿ, ಗುವಾಹಟಿ ಹೈಕೋರ್ಟ್ ಸಂಪರ್ಕಿಸಲು ಸೂಚಿಸಿತ್ತು.
ಇದನ್ನೂ ಓದಿ:
ಮುಂದೆ ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಮುಗ್ಧ ಮಹಿಳೆಯನ್ನು ರಾಜಕೀಯ ವಿವಾದಕ್ಕೆ ಎಳೆದಿದ್ದು, ಆರೋಪಗಳನ್ನು ಸಾಬೀತುಪಡಿಸಲು ವಿಫಲರಾಗಿದ್ದೀರಿ ಎಂದು ಕೋರ್ಟ್ ಟೀಕಿಸಿತ್ತು.
ಈ ತೀರ್ಪಿನ ವಿರುದ್ಧ ಖೇರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ಹೇಳಿಕೆಗಳು ರಾಜಕೀಯ ವಾಕ್ಚಾತುರ್ಯದ ಭಾಗವಾಗಿದ್ದು, ದೂರು ರಾಜಕೀಯ ದ್ವೇಷದಿಂದ ಪ್ರೇರಿತವಾಗಿದೆ ಎಂದು ವಾದಿಸಿದ್ದರು. ಈ ವಾದವನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಅವರಿಗೆ ರಕ್ಷಣೆಯನ್ನು ನೀಡಿದೆ.
ಸದ್ಯ ಸುಪ್ರೀಂ ಕೋರ್ಟ್‌ನ ಈ ಆದೇಶವು ಪವನ್ ಖೇರಾಗೆ ಮಹತ್ವದ ಸಮಾಧಾನ ತಂದಿದ್ದು, ಅಸ್ಸಾಂ ಪೊಲೀಸರ ಬಂಧನದ ಭೀತಿಯಿಂದ ಅವರಿಗೆ ತಾತ್ಕಾಲಿಕ ಮುಕ್ತಿ ಸಿಕ್ಕಂತಾಗಿದೆ.
ಇದನ್ನೂ ಓದಿ:
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…