ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದ ಹಿನ್ನೆಲೆ ಕಾಂಗ್ರೆಸ್ ನಾಯಕ ಗುರುವಾರ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ರಾಹುಲ್ ಗಾಂಧಿ ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಪ್ಪು ಫೋಟೋಗೆ ನಮನ ಸಲ್ಲಿಸಿದ್ದಾರೆ.ಈ ವೇಳೆ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಧೈರ್ಯದ ಮಾತುಗಳನ್ನ ಹೇಳಿದ್ದಾರೆ. ಇದರ ಜೊತೆಗೆ ರಾಘವೇಂದ್ರ ರಾಜ್ಕುಮಾರ್ಗೂ ರಾಹುಲ್ ಗಾಂಧಿ ಸಮಾಧಾನದ ಮಾತುಗಳನ್ನ ಹೇಳಿದ್ದಾರೆ. ರಾಹುಲ್ ಗಾಂಧಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್ ನಿವಾಸಕ್ಕೆ ಭದ್ರತೆ ನೀಡಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…