Featured

ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ..

ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.

ನಿನ್ನೆ ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಇದನ್ನೂ ಓದಿ :ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24

ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‍ಶಾಂತಿ ಅವರಾದ ವಿ.ಕೆ.ಜಯರಾಜ್ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.

ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದಲೂ ಆಶೀರ್ವಾದ ಪಡೆದರು.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ ಎಂದರು.

ಇದನ್ನೂ ಓದಿ : ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago