Featured

ಪವಿತ್ರ ಸ್ನಾನ, ಪೂಜೆ ಬಳಿಕ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಪವಿತ್ರ ಸ್ನಾನ, ಪೂಜೆ ಬಳಿಕ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಲಕ್ನೋ: ಗಂಗಾನದಿಗೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ವಾರಣಾಸಿಯ ಕೇಂದ್ರ ಭಾಗದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಾಣ ಮಾಡಲಾಗಿದೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.

ಕಾಶಿ ವಿಶ್ವನಾಥ್ ಕಾರಿಡಾರ್‍ನ್ನು ಉದ್ಘಾಟಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಇದೊಂದು ಐತಿಹಾಸಿಕ ಕ್ಷಣವಾಗಿದೆ. ದೇಶದ ಇತಿಹಾಸದಲ್ಲೇ ದೊಡ್ಡ ದಿನವಾಗಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಿದ್ದು ನಮ್ಮ ಪುಣ್ಯವಾಗಿದೆ. ಮುಕ್ಕಾಲು ಕೋಟಿ ದೇವರು ಕಾಶಿಯಲ್ಲಿ ಇದ್ದಾರೆ. ಕಾಲಭೈರವನ ದರ್ಶನ ಪಡೆದು ಬಂದಿದ್ದೇನೆ. ಕಾಶಿಯ ದರ್ಶನದಿಂದ ಸಕಲ ಸಂಕಷ್ಟ ದೂರವಾಗುತ್ತದೆ. ಈ ಕಾರ್ಯಕ್ರಮವು ನನಗೆ ಸಂತೋಷವನ್ನು ತಂದಿದೆ ಎಂದರು.

ಕಣ್ಮರೆಯಾಗಿರುವ ಮಂದಿರಗಳನ್ನು ಮರುಸ್ಥಾಪನೆ ಮಾಡಿದ್ದೇವೆ. ಕಾಶಿ ನಮ್ಮ ಆದ್ಯಾತ್ಮಿಕತೆಯ ಪ್ರತೀಕವಾಗಿದೆ. ಪರಂಪರೆ ಪ್ರೇರಣೆಯಾಗುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಈ ಪರಿಸರದಲ್ಲಿ ದೈವಿಕ ವಾತಾವರಣದೆ. ಪ್ರಾಚಿನ ಕಾಶಿಗೆ ಆಧುನಿಕ ಸ್ಪರ್ಶ ಸಿಕ್ಕಿದೆ. ಇಂದು ಶಿವನ ಪ್ರಿಯ ವಾರವಾಗಿದ್ದು, ಇಂದೇ ಕಾರಿಡಾರ್ ಲೋಕಾರ್ಪಣೆಗೊಂಡಿದೆ. ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು ಎಂದರು.

ಕಾಶಿ ವಿಶ್ವನಾಥನ ಕ್ಷೇತ್ರಕ್ಕೆ ಹೊಸ ರೂಪ ನೀಡುವ 399 ಕೋಟಿ ರೂ. ಮೊದಲ ಹಂತದ ಕಾಶಿ ಕಾರಿಡಾರ್ ನ್ನು ಮೋದಿ ಉದ್ಘಾಟಿಸಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿಯವರು ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಅಲಕಾನಂದ ಕ್ರೂಸ್‍ನಲ್ಲಿ ಲಲಿತಾ ಘಾಟ್‍ಗೆ ತೆರಳಿ ಅಲ್ಲಿ ಕಾವಿಧಾರಿಯಾಗಿ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಅಲ್ಲಿ ಅಘ್ರ್ಯ ಅರ್ಪಿಸಿ ರುದ್ರಾಕ್ಷಿ ಮಾಲೆ ಹಿಡಿದು ಜಪ ಮಾಡಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago