Featured

ಪವಿತ್ರ ಹಜ್ ಯಾತ್ರೆಗೆ ನೀಡುವ ಸಬ್ಸಿಡಿ ರದ್ದು ಮಾಡಿದ ಪಾಕಿಸ್ತಾನ ಸರಕಾರ – Vishwanews24

ಇಸ್ಲಾಮಾಬಾದ್ಪವಿತ್ರ ಕ್ಷೇತ್ರ ಮೆಕ್ಕಾ ಮತ್ತು ಮದೀನಾಕ್ಕೆ ಹಜ್ ಯಾತ್ರೆ ಕೈಗೊಳ್ಳುವವರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಪಾಕಿಸ್ತಾನ ಸರ್ಕಾರ ರದ್ದು ಮಾಡಿದೆ.

ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ವಾರ್ಷಿಕವಾಗಿ 450 ಕೋಟಿ ಪಾಕ್ ರೂಪಾಯಿಗಳು ಉಳಿತಾಯವಾಗಲಿದೆ.

ಪಾಕಿಸ್ತಾನದ ಆರ್ಥಿಕ ಸ್ಥಿತಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡುವುದಕ್ಕೆ ಇಸ್ಲಾಂನಲ್ಲಿ ಅವಕಾಶ ಇದೆಯೆ ಅಥವಾ ಇಲ್ಲವೆ ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು ಎಂದು ಧಾರ್ವಿುಕ ಸಚಿವ ನೂರುಲ್ ಹಕ್ ಖಾದ್ರಿ ತಿಳಿಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದ ಪಿಎಂಎಲ್-ಎನ್ ಪಕ್ಷ ಸರ್ಕಾರಿ ಕೋಟಾದಲ್ಲಿ ಹಜ್ ಯಾತ್ರೆ ಕೈಗೊಳ್ಳುವವರಿಗೆ 42 ಸಾವಿರ ರೂ. ಸಬ್ಸಿಡಿ ನೀಡುತ್ತಿತ್ತು.

ಇಸ್ಲಾಂ ಧರ್ಮದಲ್ಲಿ ಪ್ರತಿಯೊಬ್ಬರೂ ನಿಭಾಯಿಸಬೇಕಾದ ಐದು ಪ್ರಮುಖ ಕರ್ತವ್ಯಗಳ ಪೈಕಿ ಹಜ್ ಯಾತ್ರೆ ಕೂಡ ಒಂದು. ಇಸ್ಲಾಂನ ಪ್ರಮುಖ ಸ್ತಂಭಗಳಲ್ಲಿ ಹಜ್ ಯಾತ್ರೆಗೆ ಸ್ಥಾನ ನೀಡಲಾಗಿದೆ. ಪ್ರತಿಯೊಬ್ಬ ಮುಸಲ್ಮಾನ ನಮಾಜ್ ಮತ್ತು ರೋಜಾವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆಯೇ ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಯನ್ನು ಕೈಗೊಳ್ಳಬೇಕು. ಪ್ರಯಾಣ, ವಸತಿ, ಆಹಾರದ ಖರ್ಚನ್ನು ಯಾತ್ರಿಕರು ಸ್ವಂತವಾಗಿ ಭರಿಸಬೇಕು ಎಂಬ ಉಲ್ಲೇಖ ಕುರಾನ್​ನಲ್ಲಿ ಇದೆ ಎಂಬುದು ಇಸ್ಲಾಂ ಧಾರ್ವಿುಕ ಮುಖಂಡರ ಅಭಿಪ್ರಾಯ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago