ಹುಬ್ಬಳ್ಳಿ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ( ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಿ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ನೋವಾಗಿದೆ. ಹೀಗಾಗಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.
ಇದನ್ನೂ ಒದಿ:
ಬಿಜೆಪಿಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆಯಿಲ್ಲ ಎನ್ನುವುದು ದೃಢವಾಗಿದೆ. ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಈ ಮೂಲಕ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ. 37 ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದೇನೆ. ಇದನ್ನು ಗುರುತಿಸದೇ ಪಕ್ಷ ಹೊರಗಿನಿಂದ ಬಂದವರಿಗೆ ಮಣೆ ಹಾಕಿ ಟಿಕೆಟ್ ನೀಡಿದ್ದು, ಸಾಕಷ್ಟು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈಗಲೂ ಕಾಲ ಮಿಂಚಿಲ್ಲ. ನನಗೆ ಟಿಕೆಟ್ ಸಿಗುವ ಭರವಸೆ ಇದ್ದು, ಎಂಟು ದಿನಗಳವರೆಗೆ ಕಾದು ನೋಡುತ್ತೇನೆ. ಅವಕಾಶ ಸಿಗದಿದ್ದರೆ ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.
ಇದನ್ನೂ ಒದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…