ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ : ಪ್ರಶಾಂತ್ ಕಿಶೋರ್ -Vishwanews24
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ : ಪ್ರಶಾಂತ್ ಕಿಶೋರ್ -Vishwanews24
For all the hype AMPLIFIED by a section of supportive media, in reality BJP will struggle to CROSS DOUBLE DIGITS in #WestBengal
PS: Please save this tweet and if BJP does any better I must quit this space!
— Prashant Kishor (@PrashantKishor) December 21, 2020
ಕೋಲ್ಕತ್ತಾ;ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಬಿಜೆಪಿ ಭರ್ಜರಿ ಪ್ರಚಾರ ಕೈಗೊಂಡಿದೆ.
ಈ ನಡುವೆ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ದಾಟಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ರಾಜಕೀಯ ನಿಪುಣ ಪ್ರಶಾಂತ್ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಟ್ವೀಟರ್ ನಲ್ಲಿ ಬಿಜೆಪಿಗೆ ಸವಾಲು ಹಾಕಿರುವ ಪ್ರಶಾಂತ್ ಕಿಶೋರ್, ಮಾಧ್ಯಮಗಳು ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಹೈಪ್ ನೀಡುತ್ತೀವೆ. ಆದರೆ, ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ಈ ಬಾರಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದು ಕಷ್ಟ. ಗೆಲುವಿಗಾಗಿ ಸಾಕಷ್ಟು ಹೆಣಗಾಡಲಿದೆ. ಒಂದು ವೇಳೆ ಅವರು ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.
