Featured

ಪಶ್ಚಿಮ ಬಂಗಾಳದಲ್ಲಿ ವಾಸಿಸುವವರು ಬೆಂಗಾಲಿ ಮಾತನಾಡಲು ಕಲಿಯಲೇಬೇಕು : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತಾ,: ಪಶ್ಚಿಮ ಬಂಗಾಳದಲ್ಲಿ ವಾಸಿಸುವವರು ಬೆಂಗಾಲಿ ಮಾತನಾಡಲು ಕಲಿಯಲೇಬೇಕು. ಬೆಂಗಾಲಿ ಭಾಷಿಕ ಜನರನ್ನು ಬೆಂಗಾಲಿಯೇತರರು ಗುರಿಯಾಗಿಸುವುದನ್ನು ಮುಂದುವರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯ ಕಂಚ್ರಪರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಬಂಗಾಳವನ್ನು ಮುಂದಕ್ಕೆ ತರಬೇಕಿದೆ. ನಾನು ಬಿಹಾರ, ಉತ್ತರ ಪ್ರದೇಶ, ಪಂಜಾಬ್‌ಗಳಿಗೆ ಹೋದಾಗ ಅವರ ಭಾಷೆಯನ್ನೇ ಮಾತನಾಡುತ್ತೇನೆ. ಯಾರಾದರೂ ಬಂಗಾಳದಲ್ಲಿ ವಾಸಿಸುತ್ತಿದ್ದರೆ, ಅವನು ಅಥವಾ ಅವಳು ಬೆಂಗಾಲಿ ಕಲಿಯಬೇಕು’ ಎಂದು ಹೇಳಿದರು.

‘ನಾನು ಬಿಹಾರದಲ್ಲಿ ಹಿಂದಿಯಲ್ಲಿ ಮಾತನಾಡುತ್ತೇನೆ. ಏಕೆಂದರೆ ಅದರ ಭಾಷೆ ಹಿಂದಿ. ತಮಿಳುನಾಡಿನಲ್ಲಿ ಮಾತ್ರವೇ ನಾನು ಕೆಲವು ಪದಗಳನ್ನು ತಮಿಳಿನಲ್ಲಿ ಮಾತನಾಡುತ್ತೇನೆ. ಏಕೆಂದರೆ ನನಗೆ ಆ ಭಾಷೆ ಬರುವುದಿಲ್ಲ. ನೀವು ಬಂಗಾಲದಲ್ಲಿ ವಾಸಿಸುವುದಾದರೆ ಬೆಂಗಾಲಿಯಲ್ಲಿ ಮಾತನಾಡಬೇಕು. ನೀವು ಬೇರೆ ಭಾಷೆ ಮಾತನಾಡಿದರೆ ನಮಗೇನೂ ಸಮಸ್ಯೆ ಇಲ್ಲ. ಆದರೆ ನೀವು ಬೆಂಗಾಲಿಯನ್ನೂ ಕಲಿಯಲೇಬೇಕು’ ಎಂದರು.

‘ಬಂಗಾಳದಲ್ಲಿ ಉಳಿದುಕೊಂಡು ಬೈಕ್‌ಗಳಲ್ಲಿ ಸುತ್ತಾಡುವ ಕ್ರಿಮಿನಲ್‌ಗಳನ್ನು ನಾನು ಸಹಿಸುವುದಿಲ್ಲ. ಅವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಬಂಗಾಳಿಯೇತರ ವ್ಯಕ್ತಿಗಳು ಬೆಂಗಾಲಿ ಮಾತನಾಡುವ ಜನರನ್ನು ಗುರಿಯಾಗಿರಿಸಿಕೊಂಡರೆ ಬಂಗಾಳದ ಜನರು ಸುಮ್ಮನೆ ಇರುತ್ತಾರೆಯೇ? ಮಹಾರಾಷ್ಟ್ರ ಮತ್ತು ಗುಜರಾತ್‌ನಿಂದ ಬಿಹಾರಿಗಳನ್ನು ಹೊರಹಾಕಿದಂತೆ ನಾವು ಜನರನ್ನು ಹೊರಹಾಕಲು ಬಯಸುವುದಿಲ್ಲ. ಆದರೆ, ಬಂಗಾಳದಲ್ಲಿ ವಾಸಿಸುತ್ತಾ, ಬಂಗಾಳಿಗಳನ್ನೇ ಬೆದರಿಸುವುದನ್ನು ಎಷ್ಟು ಕಾಲ ಎಂದು ಸಹಿಸಿಕೊಳ್ಳಲು ಸಾಧ್ಯ? ನಾನು ಇದನ್ನು ಸಹಿಸುವುದಿಲ್ಲ’ ಎಂದರು.

 

Vishwa News 24

Recent Posts

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

4 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

15 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

41 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

45 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

51 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

1 hour ago