ಕೋಲ್ಕತ್ತಾ,: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು ವಿಧಾನಸಭೆಯ ಅಂಗಳದವರೆಗೆ ಸುವೇಂದು ಅಧಿಕಾರಿ ನಡೆದು ಬಂದ ಹಾದಿ ಅತ್ಯಂತ ರೋಚಕವಾಗಿದೆ.
ಪಶ್ಚಿಮ ಬಂಗಾಳದ 293 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.
ರವೀಂದ್ರನಾಥ ಠಾಗೋರ್ ಅವರ 165ನೇ ಜನ್ಮದಿನದಂದೇ ಸುವೇಂದು ಅಧಿಕಾರಿ ಅವರ ಪ್ರಮಾಣವಚನ ಸ್ವೀಕಾರ ನಡೆಯುತ್ತಿದೆ.
2021ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ನಂದಿಗ್ರಾಮದಲ್ಲಿ ಸೋಲಿಸಿದ್ದ ಸುವೇಂದು ಅಧಿಕಾರಿ, ಈಗ ರಾಜ್ಯದ ಸಿಎಂ ಆಗುತ್ತಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ
ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ. ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…