Featured

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮುಕುಲ್ ರಾಯ್ ನಿಧನ – vishwanews24

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮುಕುಲ್ ರಾಯ್ ನಿಧನ

ಕೋಲ್ಕತ್ತಾ : ಪಶ್ಚಿಮ ಬಂಗಾಳ ರಾಜಕೀಯದ ಪ್ರಮುಖ ಮುಖ ಹಾಗೂ ‘ರಾಜಕೀಯ ಚಾಣಕ್ಯ’ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್ (71) ಅವರು ಇಂದು ಬೆಳಗಿನ ಜಾವ ನಿಧನರಾದರು. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 1.30ರ ಸುಮಾರಿಗೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಾಜಿ ರೈಲ್ವೆ ಸಚಿವರಾಗಿದ್ದ ರಾಯ್, ಒಂದು ಕಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕರಾಗಿದ್ದು, ಪಕ್ಷದ ಎರಡನೇ ನಾಯಕನಂತೆ ಪರಿಗಣಿಸಲ್ಪಟ್ಟಿದ್ದರು. ಕಳೆದ ಎರಡು ವರ್ಷಗಳಿಂದ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಕೋಮಾಗೆ ಜಾರಿದ್ದ ಅವರು ನೆನಪಿನ ಶಕ್ತಿಯನ್ನೂ ಕಳೆದುಕೊಂಡಿದ್ದರು. ಪರಿಚಿತ ಮುಖಗಳನ್ನು ಗುರುತಿಸಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ರೈಲ್ಸ್ ಟ್ಯೂಬ್ ಮೂಲಕ ದ್ರವ ಆಹಾರ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಅವರ ಪಾರ್ಥಿವ ಶರೀರವನ್ನು ನಿವಾಸಕ್ಕೆ ತರಲಾಗಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.

1998ರಲ್ಲಿ ಮಮತಾ ಬ್ಯಾನರ್ಜಿ ಅವರೊಂದಿಗೆ ಸೇರಿ ತೃಣಮೂಲ ಕಾಂಗ್ರೆಸ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ ರಾಯ್, ಬಳಿಕ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ತಂತ್ರಗಾರಿಕೆಯ ಮೂಲಕ ಬಂಗಾಳ ರಾಜಕೀಯದಲ್ಲಿ ಮಹತ್ವದ ಸ್ಥಾನವನ್ನು ಗಳಿಸಿದ್ದ ಅವರು, 2017ರಲ್ಲಿ ಅಚ್ಚರಿಯ ನಿರ್ಧಾರ ತೆಗೆದುಕೊಂಡು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರ್ಪಡೆಯಾದರು.

ರಾಜ್ಯದಲ್ಲಿ ಬಿಜೆಪಿಯ ಕಾರ್ಯತಂತ್ರದ ಪ್ರಮುಖ ನಾಯಕನಾಗಿದ್ದ ರಾಯ್, 2019ರ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ನೆರವಾದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರು.

ಆದರೆ ಬಳಿಕ ಪಕ್ಷದೊಳಗಿನ ಅವರ ಪ್ರಭಾವ ಕುಗ್ಗತೊಡಗಿದ್ದು, ಅಂತಿಮವಾಗಿ ಅವರು ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದರು. ಇದೇ ಅವಧಿಯಲ್ಲಿ ಸುವೇಂದು ಅಧಿಕಾರಿ ವಿರೋಧ ಪಕ್ಷದ ನಾಯಕರಾಗಿ ಹೊರಹೊಮ್ಮಿದರು. 2025ರಲ್ಲಿ ಕಲ್ಕತ್ತಾ ಹೈಕೋರ್ಟ್ ರಾಯ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ, ಟಿಎಂಸಿಗೆ ಮರು ಸೇರ್ಪಡೆಯಾಗಿರುವುದು ಪಕ್ಷಾಂತರ ವಿರೋಧಿ ಕಾನೂನಿಗೆ ವಿರುದ್ಧ ಎಂದು ತೀರ್ಪು ನೀಡಿತ್ತು. ರಾಜಕೀಯ ಚಾಣಾಕ್ಷತೆ, ಸಂಘಟನೆ ಶಕ್ತಿ ಹಾಗೂ ತಂತ್ರಗಾರಿಕೆಯಿಂದ ಗುರುತಿಸಿಕೊಂಡಿದ್ದ ಮುಕುಲ್ ರಾಯ್ ಅವರ ನಿಧನಕ್ಕೆ ಪಶ್ಚಿಮ ಬಂಗಾಳ ರಾಜಕೀಯ ವಲಯ ಕಣ್ಣೀರಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago