Featured

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ – vishwanews24

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭವಾಗಿದೆ.

ಮಗರ್ಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್‌ನ ನಾಲ್ಕು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ಮುಂದುವರೆಯಲಿದೆ.

ಈ ಕ್ಷೇತ್ರಗಳಲ್ಲಿ ಏ.29 ರಂದು ಎರಡನೇ ಹಂತದ ಮತದಾನ ನಡೆದಿತ್ತು. ಮತದಾನದ ಬಳಿಕ ಚುನಾವಣಾ ಆಯೋಗಕ್ಕೆ ಈ ಮತಗಟ್ಟೆಗಳಲ್ಲಿ ಅಕ್ರಮ ನಡೆದಿದೆ ಎಂಬ ದೂರುಗಳು ಬಂದಿದ್ದವು. ಅಕ್ರಮ ಆರೋಪದ ದೂರುಗಳಿಗೆ ಸ್ಪಂದಿಸಿದ ಚುನಾವಣಾ ಆಯೋಗ ದಕ್ಷಿಣ 24 ಪರಗಣ ಜಿಲ್ಲೆಯ 15 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುತ್ತಿದೆ.

ಇದನ್ನೂ ಓದಿ:

 

ಈ ಕ್ಷೇತ್ರಗಳಿಂದ ಎಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ) ಅಸಮರ್ಪಕ ಕಾರ್ಯ, ಮತಗಟ್ಟೆ ವಶಪಡಿಸಿಕೊಳ್ಳುವಿಕೆ, ಬೆದರಿಕೆ ಹಾಗೂ ಮತದಾನದ ಗೌಪ್ಯತೆಯ ಉಲ್ಲಂಘನೆಯಂತಹ ಅಕ್ರಮಗಳನ್ನು ಉಲ್ಲೇಖಿಸಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಮತಗಟ್ಟೆ ಏಜೆಂಟ್‌ಗಳು, ವೀಕ್ಷಕರು ಮರು ಮತದಾನಕ್ಕೆ ಒತ್ತಾಯಿಸಿದ್ದರು.

Vishwa News 24

Recent Posts

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

20 minutes ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

44 minutes ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

58 minutes ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

2 hours ago

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…

2 hours ago

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…

3 hours ago