Featured

ಪಹಲ್ಗಾಮ್ ಉಗ್ರರ ದಾಳಿ : ರಾಜಕೀಯ ಮಾಡಲ್ಲ , ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ  :  ಡಿಕೆಶಿ – vishwanews24

ಪಹಲ್ಗಾಮ್ ಉಗ್ರರ ದಾಳಿ :  ರಾಜಕೀಯ ಮಾಡಲ್ಲ , ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ  :  ಡಿಕೆಶಿ

ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ, ರಾಜಕೀಯ ಮಾಡುವುದಿಲ್ಲ. ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ಹೇಳಿದರು.

ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದರು.

ಈ ಘಟನೆ ವಿದೇಶಾಂಗ ನೀತಿ, ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜೊತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಧರ್ಮದ ಆಧಾರದ ಮೇಲೆ ಹತ್ಯೆ ನಡೆಸಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago