Featured

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ  ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ : ಮುತಾಲಿಕ್‌ ವಾಗ್ದಾಳಿ  – vishwanews24

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು  ಖಮೇನಿ  ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ : ಮುತಾಲಿಕ್‌ ವಾಗ್ದಾಳಿ

ಚಿಕ್ಕಮಗಳೂರು: ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ  ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಇರಾನ್ ಪರಮೋಚ್ಛ ನಾಯಕ ಖಮೇನಿ ಓರ್ವ ರಾಕ್ಷಸ. ಮಹಿಳೆಯರ ಮೇಲೆ ಅತ್ಯಂತ ದೌರ್ಜನ್ಯ ಎಸಗಿದವರ ಪರ ಪ್ರತಿಭಟನೆ ಮಾಡುವವರಿಗೆ ಮಾನ ಮರ್ಯಾದೆ ಇದೆಯಾ? ಎಂದು ಪ್ರಶ್ನಿಸಿದರು. ಇದೇ ವೇಳೆ, ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಶಿಯಾ ಮುಸ್ಲಿಮರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದನ್ನು ಅವರು ಖಂಡಿಸಿದ್ದಾರೆ.

ಇದನ್ನೂ ಓದಿ 👇:

 

ಮುಸ್ಲಿಂ ರಾಷ್ಟ್ರಗಳನ್ನು ನೆಮ್ಮದಿಯಿಂದ ಇರಲು ಬಿಡದ ಈ ವ್ಯಕ್ತಿ ಭಾರತದ ಪಾಲಿಗೂ ವಿರೋಧಿ ಆಗಿದ್ದರು. ಕಾಶ್ಮೀರಕ್ಕೆ ಸಂಬಂಧಿಸಿದ ವಿಧಿ 370 ರದ್ದುಪಡಿಸಿದಾಗ ಅದನ್ನು ಬಲವಾಗಿ ವಿರೋಧಿಸಿದ್ದರು. ಇಂತಹ ವ್ಯಕ್ತಿ ಸತ್ತಾಗ ನಮ್ಮ ದೇಶದಲ್ಲಿ ಪ್ರತಿಭಟನೆ ನಡೆಸುವ ಅಗತ್ಯವೇನಿದೆ? ಅವರಿಗೂ ಇಲ್ಲಿನವರಿಗೂ ಏನು ಸಂಬಂಧ ಎಂದು ಅವರು ಪ್ರಶ್ನಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‍ನಲ್ಲಿ 26 ಜನರ ಹೆಣ ಬಿದ್ದಾಗ ಅಥವಾ ದೇಶದ ಜನ ಸತ್ತಾಗ ಮೌನವಾಗಿದ್ದವರು. ಈಗ ಎಲ್ಲಿಯೋ ಸತ್ತ ಕ್ರೂರಿಗಾಗಿ ನಮ್ಮ ದೇಶದ ಅನ್ನ ತಿಂದು ಪ್ರತಿಭಟನೆ ಮಾಡುತ್ತಿರುವುದು ಎಷ್ಟು ಸರಿ?

ಬೆಂಗಳೂರಿನ ಶಾಂತಿನಗರದಲ್ಲಿ ಶಾಸಕ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿ, ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆಗೆ ಜಾಗ ನಿಗದಿಯಾಗಿದ್ದರೂ ನಿಯಮ ಮೀರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಶಿವಮೊಗ್ಗದ ಪ್ರತಿಭಟನೆಯಲ್ಲಿ ಖಮೇನಿಯನ್ನು ಮಹಾತ್ಮ ಗಾಂಧೀಜಿಯವರಿಗೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಅಹಿಂಸಾವಾದಿ ಗಾಂಧೀಜಿಯವರಿಗೆ ಹಿಂಸಾವಾದಿ ಖಮೇನಿಯನ್ನು ಹೋಲಿಸುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ 👇:

ಖಮೇನಿ ಸಾವಿನಿಂದ ಇಂದು ಜಗತ್ತಿನಲ್ಲಿ ಶಾಂತಿ ನೆಲೆಸಿದೆ. ಈ ದೇಶದ ವಿರುದ್ಧ ನಿಂತಿದ್ದ ವ್ಯಕ್ತಿಯ ಪರವಾಗಿ ನಿಲ್ಲುವ ಮುಸ್ಲಿಂ ಮುಖಂಡರಿಗೆ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

15 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

15 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

15 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

19 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

19 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

19 hours ago