ಪಹಲ್ಗಾಮ್ ದಾಳಿ :ಪಾಕಿಸ್ತಾನದಲ್ಲಿರುವ ಭಾರತೀಯರು  ಶೀಘ್ರ ಭಾರತಕ್ಕೆ ವಾಪಸ್‌ ಆಗುವಂತೆ ಕೇಂದ್ರ ಸೂಚನೆ – vishwanews24

Featured, ರಾಷ್ಟ್ರ ನ್ಯೂಸ್

ಪಹಲ್ಗಾಮ್ ದಾಳಿ :ಪಾಕಿಸ್ತಾನದಲ್ಲಿರುವ ಭಾರತೀಯರು  ಶೀಘ್ರ ಭಾರತಕ್ಕೆ ವಾಪಸ್‌ ಆಗುವಂತೆ ಕೇಂದ್ರ ಸೂಚನೆ

ನವದೆಹಲಿ:ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ಪಾಕಿಸ್ತಾನದಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ವಾಪಸ್‌ ಆಗುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.ಕೇಂದ್ರ ಸರ್ಕಾರ ಭಾರತೀಯ ನಾಗರಿಕರು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಮತ್ತು ಪಾಕಿಸ್ತಾನದಲ್ಲಿರುವವರು ಆದಷ್ಟು ಬೇಗ ಭಾರತಕ್ಕೆ ಮರಳುವಂತೆ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿ ತೆಗೆದುಕೊಂಡಿದ್ದರು. ದಾಳಿಯ ನಂತರ ಭಾರತ ಸಂಪುಟ ಸಮಿತಿ ಸಭೆ ನಡೆಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಕ್ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳು ಏ.27 ರಿಂದ ರದ್ದಾಗಲಾಗಿದ್ದು, ಅವರಿಗೆ 48 ಗಂಟೆಗಳಲ್ಲಿ ಭಾರತವನ್ನು ತೊರೆಯುವಂತೆ ಸೂಚಿಸಲಾಗಿತ್ತು.

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ – vishwanews24

Leave a Reply