ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.
ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ.
ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ.
ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…